ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿವೇತನ, ಶುಲ್ಕಮರುಪಾವತಿ, ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 30ರೊಳಗೆ ಅರ್ಜಿ ಸಲ್ಲಿಸಬೇಕು. ಇಲಾಖಾ ಸಹಾಯವಾಣಿ ದೂ.ಸಂ 8050770005 ಸಂಪರ್ಕಿಸಬಹುದು.