ಜಿಲ್ಲೆ

ಕೆರೆಯಲ್ಲಿ ಯುವಕನ ಶವ ಪತ್ತೆ

ಚಾಮರಾಜನಗರ: ತಾಲೂಕಿನ ಕಾಳನಹುಂಡಿ ಕೆರೆಯಲ್ಲಿ ಶುಕ್ರವಾರ ಯುವಕನ ಶವ ಪತ್ತೆಯಾಗಿದೆ.
ಗ್ರಾಮದ ಗಣೇಶ(22) ಮೃತಪಟ್ಟ ದುರ್ದೈವಿ.

ವಿಷಯ ತಿಳಿದು ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಸಿಮ್ಸ್ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ಒಪ್ಪಿಸಿದರು. ಯುವಕನ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.