ಜಿಲ್ಲೆ

ದಾಖಲೆ ಇಲ್ಲದ 34 ಲಕ್ಷ ರೂ. ವಶ

reportermys

ಚಾಮರಾಜನಗರ: ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರಿಕಾಟಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 34 ಲಕ್ಷ ರೂ.ವಶಕ್ಕೆ ಪಡೆಯಲಾಗಿದೆ.


ಚುನಾವಣಾ ಕರ್ತವ್ಯಕ್ಕೆ ಸಂಬಂಧಿಸಿದಂತೆ ನಿಯೋಜನೆಯಾಗಿದ್ದ ಅಧಿಕಾರಿಗಳ ತಂಡಗಳು ಹಾಗೂ ಪೊಲೀಸ್ ಅಧಿಕಾರಿ, ಸಿಬ್ಬಂದಿ ಬುಧವಾರ ವಾಹನ ತಪಾಸಣಾ ವೇಳೆಯಲ್ಲಿ ದಾಖಲೆ ಇಲ್ಲದ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಲಾಗಿದೆ ಎಂದು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.