ಚಾಮರಾಜನಗರ: ಶಿಕ್ಷಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿವಿಧ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಮಂಗಲ ಗ್ರಾಮದ ಶಿಕ್ಷಕರನ್ನು ಸನ್ಮಾನಿಸಲಾಯಿತು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಂಗಲ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಶಿಕ್ಷಕ ಡಾ.ಪ್ರಭುಸ್ವಾಮಿ ವಾಲಿಬಾಲ್ ಕ್ರೀಡೆಯಲ್ಲಿ ಪ್ರಥಮ ಮತ್ತು ಕಬ್ಬಡ್ಡಿಯಲ್ಲಿ ದ್ವಿತೀಯ ಬಹುಮಾನ, ಸಹಶಿಕ್ಷಕ ಮಲ್ಲಶೆಟ್ಟಿ ಕಬಡ್ಡಿಯಲ್ಲಿ ದ್ವಿತೀಯ ಹಾಗೂ ಓಟ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದಿದ್ದರು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ರವಿಕುಮಾರ್ ಗಾಯನ ಸ್ಪರ್ಧೆ ಮತ್ತು ಜಯರಾಜು ಎತ್ತರ ಜಿಗಿತ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದರು. ಶಿಕ್ಷಕಿ ರಾಜೇಶ್ವರಿ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದರು. ಇವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.