ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರು ಜಗತ್ತಿನಲ್ಲೇ ಮಾದರಿಯಾದ ಸಂವಿಧಾನವನ್ನು ದೇಶಕ್ಕೆ ನೀಡಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಂತರರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಭೋದಿಸಿ ಮಾತನಾಡಿದರು.
ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಎಲ್ಲರು ಮೆಚ್ಚುವಂತ ಅಭಿವೃದ್ದಿ ಪರವಾದ ಸಂವಿಧಾನವನ್ನು ರಚನೆ ಮಾಡಿಕೊಟ್ಟ ಅಂಬೇಡ್ಕರ್ ದೇಶದ ಅಭಿವೃದ್ದಿಗೆ ಭದ್ರತಾ ಬುನಾದಿಯನ್ನು ಹಾಕಿಕೊಟ್ಟಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್.ಸಿ. ಮಹದೇವಪ್ಪ ನೇತೃತ್ವದಲ್ಲಿ ವಿಧಾನ ಸೌಧದ ಮುಂಭಾಗ ಸಂವಿಧಾನ ಪೀಠಿಕೆಯನ್ನು ಓದಿ ಪ್ರತಿಜ್ಞಾ ವಿಧಿ ಸ್ವೀಕಾರ ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶ್ರೇಷ್ಠ ಸಂವಿಧಾನವನ್ನು ಜಾರಿ ಮಾಡುವ ಮೂಲಕ ಸಮಾನತೆ, ಭ್ರಾತೃತ್ವ, ಸಹಬಾಳ್ವೆಯಿಂದ ಬಾಳೋಣ ಎಂದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಚಿಕ್ಕಮಹದೇವ್, ಬ್ಲಾಕ್ ಅಧ್ಯಕ್ಷ ಮಹಮದ್ ಅಸ್ಗರ್, ಎಸ್ಸಿ ಘಟಕದ ಅಧ್ಯಕ್ಷ ನಲ್ಲೂರು ಸೋಮೇಶ್ವರ್, ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಅಫ್ಜರ್ ಷರೀಪ್, ಚುಡಾ ಮಾಜಿ ಅಧ್ಯಕ್ಷ ಸುಹೇಲ್ ಆಲಿ ಖಾನ್, ಮುಖಂಡರಾದ ನಾಗವಳ್ಳಿ ನಾಗಯ್ಯ, ಶಿವಮೂರ್ತಿ, ಕಾಗವಲವಾಡಿ ಚಂದ್ರು, ತಾ.ಪಂ. ಮಾಜಿ ಸದಸ್ಯ ಎಸ್.ರಾಜು, ಶಿವಸ್ವಾಮಿ, ಮಹದೇವಶೆಟ್ಟಿ, ಜಿ.ಪಂ. ಮಾಜಿ ಸದಸ್ಯ ಎಸ್. ಸೋಮನಾಯಕ, ಅರುಣ್‌ಕುಮಾರ್, ಅಯುಬ್ ಖಾನ್, ಸೋಮಣ್ಣ, ಎಪಿಎಂಸಿ ನಿರ್ದೇಶಕ ಸೋಮೇಶ್, ಎನ್.ಆರ್. ಪುರುಷೋತ್ತಮ್, ಮುತ್ತಿಗೆ ದೊರೆ, ಪುಟ್ಟಸ್ವಾಮಿ, ಮಹದೇವ್, ಶಕುಂತಲಾ, ಜಗದೀಶ್, ಪ್ರಥ್ವಿ ಉಪಸ್ಥಿತರಿದ್ದರು.