ಜಿಲ್ಲೆ

ಮೇ 27ರಂದು ಹೊಂಗನೂರು ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ಒಂದನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಮೇ 27 ರಂದು ಹಮ್ಮಿಕೊಂಡಿರುವುದರಿಂದ ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಹೊಂಗನೂರು ಭಾಗದ ವಿವಿವಿಧೆಡೆ ದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಹೊಂಗನೂರು, ಇರಸವಾಡಿ, ಮಸಣಾಪುರ, ಚಾಟಿಪುರ, ಗಂಗವಾಡಿ, ಬೂದಂಬಳ್ಳಿ, ಬೂದಂಬಳ್ಳಿ ಮೋಳೆ, ಗೂಳಿಪುರ, ಹೊಮ್ಮ, ರೇಚಂಬಳ್ಳಿ, ಹೆಚ್. ಮೂಕಳ್ಳಿ, ಕುರುಬರಹುಂಡಿ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ನಿಗಮದ ಜೊತೆ ಸಹಕರಿಸಬೇಕು. ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ 1912 ಸಂಪರ್ಕಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.