ಚಾಮರಾಜನಗರ: ಹಿರಿಯ ನಾಗರೀಕರು ಮತ್ತು ವಿಕಲಚೇತನ ಅರ್ಹ ಪಾಲಾನುಭವಿಗಳಿಗೆ ಸರ್ಕಾರದ ಸೌಲಭ್ಯವನ್ನು ತಲುಪಿಸಿ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಸೂಚನೆ ನೀಡಿದರು.
ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರು ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮನುಷ್ಯನಲ್ಲಿರುವ ಸ್ವಾರ್ಥ ಚಿಂತನೆಗಳಿಂದಾಗಿ ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚಾಗುತ್ತಿದೆ. ಉದ್ಯೋಗ ಹರಸಿ ನಗರ ಪ್ರದೇಶಗಳಿಗೆ ಹೋಗುವವರು ತಮ್ಮ ಪಾಲಕರನ್ನು ಚೆನ್ನಾಗಿ ನೋಡಿಕೊಳ್ಳದೇ ಅವರ ಆರೋಗ್ಯ ಹದಗೆಡುತ್ತಿದೆ. ಪ್ರತಿಯೊಬ್ಬರು ಹಿರಿಯರನ್ನು ಕಡೆಗಣಿಸದೇ ಅವರನ್ನು ಉತತಮ ರೀತಿಯಲ್ಲಿ ನೋಡಿಕೊಳ್ಳಬೇಕು. ಈ ಮೂಲಕ ವೃದ್ಧಾಶ್ರಮಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಿದೆ. ಹಿರಿಯ ನಾಗರೀಕರು ಮತ್ತು ವಿಕಲಚೇತನರ ಮೇಲೆ ಹೆಚ್ಚಿನ ಕಾಳಜಿ ವಹಿಸಬೇಕಿದೆ ಎಂದು ಸಲಹೆ ನೀಡಿದರು.
ದ್ವಿಚಕ್ರ ವಾಹನ ಕೊಡಿಸಿಕೊಡುವಂತೆ ಸಾಕಷ್ಟು ವಿಕಲಚೇತನರು ಅರ್ಜಿ ಸಲ್ಲಿಸುತ್ತಾರೆ. ಆದರೆ ಅವರು ಸಾರಿಗೆ ಇಲಾಖೆಯಿಂದ ಲೈಸೆನ್ಸ್ ಪಡೆದುಕೊಂಡಿರುವುದಿಲ್ಲ. ಆ ಸಂದರ್ಭದಲ್ಲಿ ನಾವು ಮತ್ತು ಇಲಾಖೆಯ ಅಧಿಕಾರಿಗಳು ಏನು ಮಾಡಲು ಆಗುವುದಿಲ್ಲ. ಆಗಾಗಿ ವಿಕಲಚೇತನರು ಕಡ್ಡಾಯವಾಗಿ ದ್ವಚಕ್ರವಾಹನ ಲೈಸೆನ್ಸ್ ಪಡೆದುಕೊಳ್ಳಿ. ಸರ್ಕಾರಗಳು ವಿಕಲಚೇತನರು ಹಾಗೂ ಹಿರಿಯ ನಾಗರೀಕರಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಿದ್ದು, ಅದನ್ನು ಸದುಪಯೋಗಪಡಿಸಿಕೊಳ್ಳಿ. ಹಿರಿಯ ನಾಗರೀಕರು ಮತ್ತು ವಿಕಲಚೇತನರಿಗೆ ಸಮಾನ ಅವಕಾಶಗಳನ್ನು ಒದಗಿಸಿ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆನಂದ್‌ಪ್ರಕಾಶ್ ಮೀನಾ ಮಾತನಾಡಿ, ಹಿರಿಯ ನಾಗರೀಕರು ಮತ್ತು ವಿಕಲಚೇತನರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಸಕರ್ಅರ ಹಲವು ಸೌಲಭ್ಯಗಳನ್ನು ಒದಗಿಸಿದೆ. ದೇಶದ ಪ್ರಜಾಪ್ರಭುತ್ವ ಗಟ್ಟಿಗೊಳ್ಳುವ ನಿಟ್ಟಿನಲ್ಲಿ ಹಿರಿಯ ನಾಗರೀಕರು ಎಲ್ಲಾ ಚುನಾವಣೆಗಳಲ್ಲೂ ಮತದಾನ ಮಾಡಿ. ಸರ್ಕಾರಿ ಸವಲತ್ತುಗಳನ್ನು ಸೂಕ್ತ ರೀತಿಯಲ್ಲಿ ಬಳಕೆ ಮಾಡಿಕೊಳ್ಳಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗೀತಾಲಕ್ಷ್ಮಿ, ವಿಕಲಚೇತನ ಇಲಾಖೆಯ ಅಧಿಕಾರಿ ಸುರೇಶ್, ನಿವೃತ್ತ ಸಕರ್ಅರಿ ನೌಕರರ ಸಮಘದ ಅಧ್ಯಕ್ಷ ನಾಗೇಶ್, ಉಪಾಧ್ಯಕ್ಷ ಸೋಮಣ್ಣ, ವಕೀಲರಾದ ರೂಪಶ್ರೀ ಹಾಗೂ ಇತರರು ಉಪಸ್ಥಿತರಿದ್ದರು.