ಜಿಲ್ಲೆ

ಎಚ್.ಕಾಂತರಾಜ್ ಆಯೋಗದ ವರದಿ ಜಾರಿಗೊಳಿಸಲು ಆಗ್ರಹ

ಎ.ಎಸ್.ಮಣಿಕಂಠ

ಚಾಮರಾಜನಗರ: ರಾಜ್ಯ ಸರ್ಕಾರ 2015 ರಲ್ಲಿ ನಡೆಸಿದ್ದ ಎಚ್.ಕಾಂತರಾಜ್ ಆಯೋಗದ ವರದಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಅ.12 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಬ್ರಾರ್ ಅಹ್ಮದ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಪ್ರಗತಿಪರ, ದಲಿತಪರ ಮುಖಂಡರು ಹಾಗೂ ಎಸ್ಡಿಪಿಐ ವತಿಯಿಂದ ಮಂಗಳವಾರ ಆಯೋಜಿಸಿದ್ದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 2014 ರಲ್ಲಿ ಜನಸಂಖ್ಯಾವಾರು ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಆದೇಶ ನೀಡಿತ್ತು. 2015 ರಲ್ಲಿ ಸುಮಾರು 1.6 ಲಕ್ಷ ಸಿಬ್ಬಂದಿಗಳನ್ನು ಬಳಸಿಕೊಂಡು ಸಮೀಕ್ಷೆ ಪೂರ್ಣಗೊಳಿಸಲಾಗಿತ್ತು. ಇದಕ್ಕಾಗಿ 187 ಕೋಟಿ ರೂ. ಖರ್ಚು ಮಾಡಲಾಗಿದೆ. ಈ ವರದಿಯನ್ನು ಸಾರ್ವಜನಿಕಗೊಳಿಸುವಂತೆ ಆಗ್ರಹಿಸಿ ಅ.12 ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಾಗೂ ಅ.13 ರಂದು ಕೊಳ್ಳೇಗಾಲ, ಗುಂಡ್ಲುಪೇಟೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ವಿವಿಧ ಆಯೋಗಗಳು ನೀಡಿರುವ ವರದಿಗಳ ಪ್ರಕಾರ ಮುಸ್ಲಿಂರಿಗೆ ಶೇ.8 ರಷ್ಟು ಮೀಸಲಾತಿ ಏರಿಕೆ ಮಾಡಬೇಕು. 2ಬಿ ಮೀಸಲಾತಿ ರದ್ದತಿಯ ಬಿಜೆಪಿ ಸರ್ಕಾರದ ಶಿಾರಸ್ಸನ್ನು ರದ್ದು ಮಾಡಿ, ಕೋರ್ಟ್ ದಾವೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಎಸ್ಡಿಪಿಐ ಸೈಯದ್ ಆರ್ಿ, ಪ್ರಧಾನ ಕಾರ್ಯದರ್ಶಿ ಎಂ.ಮಹೇಶ್, ಕಾರ್ಯದರ್ಶಿ ಖಲೀಲ್‌ಉಲ್ಲಾ, ಖಜಾಂಚಿ ನಯಾಜ್ ಉಲ್ಲಾ, ದಲಿತ ಮುಖಂಡ ಯರಿಯೂರು ರಾಜಣ್ಣ, ದೊಡ್ಡಿಂದುವಾಡಿ ಸಿದ್ದರಾಜು, ಸಂಘಸೇನಾ, ಕೆ.ಎಂ.ನಾಗರಾಜ್, ರಾಮಸಮುದ್ರ ಸುರೇಶ್ ಹಾಗೂ ಇತರರು ಹಾಜರಿದ್ದರು.