ಜಿಲ್ಲೆ

ಬರಪರಿಹಾರ ನೀಡುವುದು ಕೇಂದ್ರಸರ್ಕಾರದ ಕರ್ತವ್ಯ

ಚಾಮರಾಜನಗರ: ರಾಜ್ಯ ಸರ್ಕಾರ 216 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ೋಷಣೆ ಮಾಡಿದ್ದು, ಬರಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದರೂ ಸ್ಪಂದನೆ ಮಾಡುತ್ತಿಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಆರೋಪ ಮಾಡಿದರು.

ನಗರದ ಸತ್ತಿ ರಸ್ತೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ರಾಜ್ಯದ ಬರ ಪರಿಸ್ಥಿತಿಯನ್ನು ಚರ್ಚಿಸುವ ಸಲುವಾಗಿ ಕೇಂದ್ರ ಗೃಹ ಸಚಿವರು ಹಾಗೂ ಕೃಷಿ ಸಚಿವರನ್ನು ಸೆ.23 ರಿಂದ ಭೇಟಿಗೆ ಅವಕಾಶ ಮಾಡಿಕೊಡುವಂತೆ ಕೇಳುತ್ತಿದ್ದೇವೆ. ನಮ್ಮ ಅಧಿಕಾರಿಗಳು ಕೂಡ ಕೇಂದ್ರದ ಅಧಿಕಾರಿಗಳನ್ನು ನಿರಂತರವಾಗಿ ಸಂಪರ್ಕಿಸಲು ಪ್ರಯತ್ನ ಮಾಡುತ್ತಿದ್ದು ಈ ವರೆಗೂ ಸ್ಪಂದನೆ ನೀಡಿಲ್ಲ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರವನ್ನು ಬರಪರಿಹಾರ ಕೊಡುವಂತೆ ಕೇಳುವುದು ನಮ್ಮ ಹಕ್ಕು, ಆಗೆಯೇ ಪರಿಹಾರ ನೀಡುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ. ನಾವು ಹೆಚ್ಚುವರಿಯಾಗಿ ಏನನ್ನೂ ಕೇಳುತ್ತಿಲ್ಲ, ಕಾನೂನಿನ ಪ್ರಕಾರ ಎನ್‌ಡಿಆರ್‌ಎ್ ಂಡ್ ಅನ್ವಯ ಕೇಂದ್ರ ಸರ್ಕಾರ ರಾಜ್ಯಕ್ಕೆ ಪರಿಹಾರ ಕೊಡಬೇಕಾಗಿದೆ. ಈ ನಿಟ್ಟಿನಲ್ಲಿ ಮುಂದಿನ ವಾರದಲ್ಲಿ ದೆಹಲಿಗೆ ತೆರಳಿ ಅಲ್ಲೇ ಸಚಿವರನ್ನು ಭೇಟಿ ಮಾಡುವ ಕೆಲಸವನ್ನು ಮಾಡಲಾಗುವುದು ಎಂದರು.

ಜಿಲ್ಲೆಯಲ್ಲಿರುವ ಕೊಳ್ಳೇಗಾಲ, ಯಳಂದೂರು ತಾಲೂಕು ಕಚೇರಿ ಹಾಗೂ ಸಂತೇಮರಹಳ್ಳಿ ನಾಡ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಕಂದಾಯ ಇಲಾಖೆಗೆ ಸಂಬಂಧಿಸಿದ ಕೆಲಸಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಇ-ಆಫೀಸ್ ಕಾರ್ಯರೂಪಕ್ಕೆ ತಂದಿದ್ದೇವೆ. ಈ ಹಿಂದೆ ಕಡತಗಳು ಕಳೆದು ಹೋಗಿದೆ ಎಂಬ ದೂರುಗಳು ಹೆಚ್ಚಾಗಿ ಬರುತ್ತಿತ್ತು. ಸಾರ್ವಜನಿಕರು ಕಂದಾಯ ಇಲಾಖೆಗೆ ಸಂಬಂಧಿಸಿದ ಕೆಲಸಗಳಿಗೆ ವರ್ಷಾನುಗಟ್ಟಲೆ ಅಳೆಯಬೇಕಿತ್ತು. ಇ-ಆಫೀಸ್‌ನಿಂದ ಕೆಲಸಗಳು ತ್ವರಿತಗತಿಯಲ್ಲಿ ಆಗುತ್ತದೆ. ಕಡತಗಳನ್ನು ಸುರಕ್ಷತವಾಗಿ ಹಿಡಬಹುದಾಗಿದೆ ಎಂದು ಹೇಳಿದರು.