ಜಿಲ್ಲೆ

ಚಿಕ್ಕತುಪ್ಪೂರಿನಲ್ಲಿ ಕೃಷಿ ಕಾರ್ಯಾನುಭವ ಕಾರ್ಯಕ್ರಮ

ಎ.ಎಸ್.ಮಣಿಕಂಠ

ಗುಂಡ್ಲುಪೇಟೆ: ತಾಲೂಕಿನ ಚಿಕ್ಕತುಪ್ಪೂರು ಗ್ರಾಮದಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ ನಡೆಯಿತು.

ಚಾಮರಾಜನಗರ ತಾಲೂಕಿನ ಹರದನಹಳ್ಳಿ ಬಳಿ ಇರುವ ಕೃಷಿ ಮಹಾವಿದ್ಯಾಲಯದ
ಅಂತಿಮ ವರ್ಷದ ಬಿಎಸ್ಸಿ (ಆನರ್ಸ್) ಕೃಷಿ ವಿದ್ಯಾರ್ಥಿಗಳಿಗಾಗಿ ಇತ್ತೀಚಿಗೆ ಗ್ರಾಮೀಣ ಸಹಭಾಗಿತ್ವ ಅಧ್ಯಯನ ಮತ್ತು ಕಾರ್ಯಾನುಭವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಗ್ರಾಮದ ಸಾಮಾಜಿಕ ನಕ್ಷೆ, ಸಂಪನ್ಮೂಲ ನಕ್ಷೆ, ಸಮಸ್ಯೆ ಮತ್ತು ಪರಿಹಾರ ವೃಕ್ಷ, ಸಾಂಪ್ರದಾಯಿಕ ತಾಂತ್ರಿಕ ಜ್ಞಾನ, ಹಳ್ಳಿಯ ದಿನಚರಿ, ಕಾಲ ಗಣನೆ, ಮಳೆ ನಕ್ಷತ್ರಗಳು ಹಾಗೂ ಇತರೆ ಸಮಸ್ಯೆಗಳನ್ನು ಬಿಂಬಿಸುವ ಮಾದರಿಗಳ ಮೂಲಕ ವಿದ್ಯಾರ್ಥಿಗಳು ತಮ್ಮ ವಿಚಾರಧಾರೆಯನ್ನು ಗ್ರಾಮಸ್ಥರೊಂದಿಗೆ ಹಂಚಿಕೊಂಡರು.

ಕೃಷಿ ಮಹಾವಿದ್ಯಾಲಯದ ವಿಶೇಷ ಅಧಿಕಾರಿ ಡಾ.ಸಿ. ದೊರೆಸ್ವಾಮಿ ಗ್ರಾಮೀಣ ಸಹಭಾಗಿತ್ವ ಅಧ್ಯಯನದ ಪ್ರಾಮುಖ್ಯತೆ ಬಗ್ಗೆ ವಿವರಣೆ ನೀಡಿದರು. ಗ್ರಾಮಸ್ಥರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಕಾರ್ಯಕ್ರಮ ಸಂಯೋಜಕ ಡಾ.ಮುತ್ತೇಪ್ಪ ಚಿಗಡೊಳ್ಳಿ ಹಾಗೂ ಕೃಷಿ ಮಹಾವಿದ್ಯಾಲಯದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.