ಜಿಲ್ಲೆ

ರೈಲ್ವೆ ಖಾಸಗೀಕರಣ ಖಂಡಿಸಿ ಪ್ರತಿಭಟನೆ

ಎ.ಎಸ್.ಮಣಿಕಂಠ

ಚಾಮರಾಜನಗರ: ಕೇಂದ್ರ ಸರ್ಕಾರ ರೈಲ್ವೆ ಮತ್ತು ವಿದ್ಯುತ್ ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿ ಸೆಂಟರ್ ಆ್ ಇಂಡಿಯನ್ ಟ್ರೀಡ್ ಇಂಡಿಯನ್ ಸಂಘಟನೆಯ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಮಾರುಕಟ್ಟೆ ರಸ್ತೆ, ಸಂಪಿಗೆ ರಸ್ತೆ, ಎಲ್‌ಐಸಿ ವೃತ್ತದ ಮೂಲಕ ರೈಲ್ವೆ ನಿಲ್ದಾಣದ ಮುಂಭಾಗಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಕೇಂದ್ರ ಸರ್ಕಾರ ರಾಷ್ಟ್ರೀಯ ನಗದೀಕರಣ ಪೈಪ್‌ಲೈನ್ ಯೋಜನೆಯಡಿ ಎಲ್ಲಾ ಸಾರ್ವಜನಿಕ ಉದ್ಯಮಗಳನ್ನು ಖಸಗೀಕರಣ ಮಾಡಲು ಮುಂದಾಗಿದೆ. ರ್ಕಾೆರೇಟ್ ಬಂಡವಾಳಗಾರರ ಅನುಕೂಲಕ್ಕಾಗಿ ವಿದ್ಯುತ್ ಕ್ಷೇತ್ರವನ್ನು ಸಂಪೂರ್ಣ ಖಾಸಗೀಕರಣ ಮಾಡಲು ವಿದ್ಯುತ್ ತಿದ್ದುಪಡಿ ಮಸೂದೆ-2022 ಅನ್ನು ಲೀಕಸಭೆಯಲ್ಲಿ ಮಂಡಿಸಿದೆ. ದೇಶದ ಆರ್ಥಿಕತೆಯ ಬೆನ್ನೆಲುಬಾಗಿರುವ ರೈಲ್ವೆಯನ್ನು ಖಾಸಗೀಕರಣ ಮಾಡಲು ನಿರ್ಧರಿಸಿರುವುದು ಅತ್ಯಂತ ಖಂಡನೀಯ ಎಂದು ಕಿಡಿಕಾರಿದರು.

ವಿದ್ಯುತ್ ಖಾಸಗೀಕರಣದಿಂದ ಹೆಚ್ಚು ದರ ನಿಗದಿಯಾಗಲಿದೆ. ಸಾರ್ವಜನಿಕ ವಿತರಣಾ ಕಂಪನಿಗಳು ದೀವಾಳಿಯಾಗಲಿದೆ. ರೈತರಿಗೆ ಸಾಕಷ್ಟು ಸಮಸ್ಯೆ ಎದುರಾಗಲಿದೆ. ಗುಡಿ ಕೈಗಾರಿಕೆ ಮತ್ತು ಸಣ್ಣ ಕೈಗಾರಿಗಳಿಗೆ ಬಹುದೊಡ್ಡ ಹೊಡೆತ ಬೀಳಲಿದೆ. ರೈಲ್ವೆ ಖಾಸಗೀಕರಣದಿಂದ ಟಿಕೆಟ್ ದರ ಹೆಚ್ಚಳವಾಗುತ್ತದೆ. ಟಿಕೆಟ್ ದರದಲ್ಲಿರುವ ಸಬ್ಸಿಡಿಯನ್ನು ತೆಗೆಯಲಾಗುತ್ತದೆ. ಹಿರಿಯ ನಾಗರೀಕರು, ಅಂಗವಿಕಲರು ಹಾಗೂ ಇನ್ನಿತರೆ ಪ್ರಯಾಣಿಕರಿಗೆ ಇರುವ ರಿಯಾಯಿತಿ ಬಂದ್ ಆಗಲಿದೆ. ಒಟ್ಟಾರೆ ವಿದ್ಯುತ್ ಮತ್ತು ರೈಲ್ವೆ ಖಾಸಗೀಕರಣದಿಂದ ಸಾಮಾನ್ಯ ಜನರಿಗೆ ಸಾಕಷ್ಟು ತೊಂದರೆ ಉಂಟಾಗಲಿದೆ ಎಂದು ಆರೋಪಿಸಿದರು.

ವಿದ್ಯುತ್ ಮಸೂದೆಯನ್ನು ವಾಪಸ್ ಪಡೆದು, ವಿದ್ಯುತ್ ಉತ್ಪಾದನೆ ಮತ್ತು ಸಾಗಾಣಿಕೆಯನ್ನು ಸರ್ಕಾರವೇ ನಿರ್ವಹಿಸಬೇಕು. ರೈಲ್ವೆಯಲ್ಲಿ ಸಾರ್ವಜನಿಕರ ಹೂಡಿಕೆಯನ್ನು ಹೆಚ್ಚಿಸಬೇಕು. ಖಾಲಿ ಇರುವ 3 ಲಕ್ಷ ಉದ್ಯೋಗವನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿ ನ. 26 ರಿಂದ 28 ರವರೆಗೆ ಬೆಂಗಳೂರಿನಲ್ಲಿ ಮಹಾಧರಣೀಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಸಿಐಟಿಯು ರಾಜ್ಯ ಸಮಿತಿ ಸದಸ್ಯ ಸಿದ್ದರಾಜು, ಪ್ರಧಾನ ಕಾರ್ಯದರ್ಶಿ ಅಮ್ಮನಪುರ ಸುರೇಶ್, ಖಜಾಂಚಿ ದೊರೆಸ್ವಾಮಿ, ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಸುಜಾತ, ಕಾರ್ಯದರ್ಶಿ ನಾಗಮಣಿ, ಶಾಹಿದಾಬಾನು ಸೇರಿದಂತೆ ಇತರರು ಭಾಗವಹಿಸಿದ್ದರು.