ಜಿಲ್ಲೆ

ಬಿ.ವೈ.ವಿಜಯೇಂದ್ರ ಹುಟ್ಟುಹಬ್ಬ ಆಚರಣೆ

ಎ.ಎಸ್.ಮಣಿಕಂಠ

ಚಾಮರಾಜನಗರ : ಶಾಸಕ ಬಿ.ವೈ.ವಿಜಯೇಂದ್ರ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗದ ವತಿಯಿಂದ ಭಾನುವಾರ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ಬಿ.ವೈ.ವಿಜಯೇಂದ್ರ ಅಭಿಮಾನಿಗಳ ಬಳಗದ ವತಿಯಿಂದ ವಿಜಯೇಂದ್ರ ಅವರ ಹೆಸರಿನಲ್ಲಿ ಆರ್ಚನೆ ಮಾಡಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ಮೂಡಲಧ್ವನಿ ವೃದ್ದಾಶ್ರಮದಲ್ಲಿ ವೃದ್ದರಿಂದ ಕೇಕ್ ಕತ್ತರಿಸಿ, ವೃದ್ಧರಿಗೆ ಉಪಹಾರ ವ್ಯವಸ್ಥೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬಿ.ವೈ.ವಿಜಯೇಂದ್ರ ಅಭಿಮಾನಿ ಬಳಗದ ಮೂಡ್ಲುಪುರ ನಂದೀಶ್ ಮಾತನಾಡಿ, ರಾಜ್ಯಕಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರರಾದ ಜನಪ್ರಿಯ ಶಾಸಕ ಬಿ.ವೈ.ವಿಜಯೇಂದ್ರ ಅವರಿಗೆ ಶ್ರೀಚಾಮರಾಜೇಶ್ವರ, ಶ್ರೀಚಾಮುಂಡೇಶ್ವರಿ ಹೆಚ್ವು ಆರೋಗ್ಯ, ಆಯಸ್ಸು ಕರುಣಿಸಲಿ. ಮುಂದಿನ ದಿನಗಳಲ್ಲಿ ಅವರು ರಾಜ್ಯ ಮುಖ್ಯಮಂತ್ರಿಯಾಗಲಿ ಎಂದು ಹಾರೈಸಿದರು.

ಈ ವೇಳೆ ಶಿವರಾಜ್ ಸಿದ್ದಯ್ಯನಪುರ, ಶ್ರೀನಾಥ್, ಶಿವು, ಮಹೇಶ್ ಕುಮಾರ್, ನಾಗಮಲ್ಲೇಶ್, ಮಹದೇವಸ್ವಾಮಿ, ಮಹೇಶ್, ನಿರೇಶ್, ಸಚಿ, ಪ್ರಸಾದ್ ಡೈರಿ, ಜಯಂತ್, ಮೋಹನ್, ಮಲ್ಲು ಇತರರು ಭಾಗವಹಿಸಿದ್ದರು.