ಜಿಲ್ಲೆ

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಎಡವಿದೆ

ಎ.ಎಸ್.ಮಣಿಕಂಠ

ಚಾಮರಾಜನಗರ: ರಾಜ್ಯ ಸರ್ಕಾರ ಪೂರ್ಣಪ್ರಮಾಣದಲ್ಲಿ ಅಧ್ಯಯನ ಮಾಡದೇ, ಕೆಂದ್ರ ಸರ್ಕಾರಕ್ಕೆ ಸೂಕ್ತ ರೀತಿಯ ಮಾಹಿತಿ ನೀಡದೇ ಬರನಿರ್ವಹಣೆಯಲ್ಲಿ ಸಂಪೂರ್ಣ ವಿಲವಾಗಿದೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಬರ ಅಧ್ಯಯನ ತಂಡ ಹಾಗೂ ರೈತ ಮುಖಂಡರೊಂದಿಗೆ ಸೋಮವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ರಾಜ್ಯದಲ್ಲಿ 216 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ೋಷಣೆ ಮಾಡಲಾಗಿದೆ. ಸರ್ಕಾರ ಸಮರ್ಪಕವಾಗಿ ಅಧ್ಯಯನ ಮಾಡದೇ ಬರಪೀಡಿತ ಪ್ರದೇಶಗಳನ್ನು ಗುರುತಿಸಿದ್ದು, ಬಿಜೆಪಿ ವತಿಯಿಂದ ತಂಡವಾಗಿ ರಾಜ್ಯಾದ್ಯಂತ ಭೇಟಿ ನೀಡಿ ಅಧ್ಯಯನ ಮಾಡಲಾಗುತ್ತಿದೆ. ಈ ಮೂಲಕ ರೈತರು ಹಾಗೂ ರೈತ ಮುಖಂಡರ ಸಮಸ್ಯೆಗಳನ್ನು ಆಲಿಸಲಾಗಿದೆ. ಜಿಲ್ಲೆಯಲ್ಲಿ ಸಂಪೂರ್ಣ ಬರವಿದ್ದರೂ ಕೃಷಿ ಪಂಪ್‌ಸೆಟ್‌ಗಳಿಗೆ ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ. ಕಾಡು ಪ್ರಾಣಿಗಳ ಹಾವಳಿ ಇರುವುದರಿಂದ ರಾತ್ರಿಯ ಸಮಯದಲ್ಲಿ ವಿದ್ಯುತ್ ನೀಡುವುದು ಸರಿಯಲ್ಲ ಎಂದು ಹೇಳಿದರು.

ಕೆಂದ್ರ ಸರ್ಕಾರ ರೈತರ ಖಾತೆಗೆ 8000 ರೂ. ಹಾಕುತ್ತಿದ್ದಾರೆ. ರಾಜ್ಯ ಸರ್ಕಾರ 4 ಸಾವಿರ ರೂ. ಹಾಕುತ್ತಿತ್ತು. ಕಾಂಗ್ರೆಸ್ ಸರ್ಕಾರ ಅದನ್ನು ನಿಲ್ಲಿಸಿದೆ. ಸಾಕಷ್ಟು ರೈತರು ಸಾವಯವ ಕೃಷಿ, ಗೋಸಂರಕ್ಷಣೆ, ಮೌಲ್ಯವರ್ಧಿತ ಉತ್ಪನ್ನಗಳಿಗೆ ಆದ್ಯತೆ, ರೈತರ ಬೆಳೆಗಳಿಗೆ ಸೂಕ್ತ ಬೆಲೆ ನೀಡಬೇಕು, ಕೆರೆ ತುಂಬಿಸುವ, ಹೂಳು ಎತ್ತುವ ಕುರಿತು ಚರ್ಚೆಗಳು ಆಗಿದೆ. ತಮ್ಮ ಕಷ್ಟಗಳನ್ನು ಹೇಳಿಕೊಂಡಿದ್ದಾರೆ. ಅವುಗಳನ್ನು ವಿಧಾನಸಭೆಯಲ್ಲಿ ಚರ್ಚಿಸಬೇಕು ಹಾಗೂ ಕೇಂದ್ರ ಸರ್ಕಾರಕ್ಕೂ ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ನೀಡಿದ್ದಾರೆ. ಅದರಂತೆಯೇ ರೈತರ ಕಷ್ಟಗಳಿಗೆ ಪ್ರಮಾಣಿಕವಾಗಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದರು.

ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ವೈಫಲ್ಯವಾಗಿದ್ದು, ಹಿಂಗಾರು ಕೂಡ ಕೈಕೊಟ್ಟಿದೆ. ಶೇ.50 ರಷ್ಟು ಬೆಳೆಹಾನಿ ಆಗಿದೆ. ಕಳೆದ ಎರಡು ತಿಂಗಳಿನಿಂದ ವಿದ್ಯುತ್ ಸಮಸ್ಯೆ ಉಂಟಾಗಿದೆ. ಸರ್ಕಾರ 5 ಗಂಟೆ ಕರೆಂಟ್ ನೀಡುತ್ತೇವೆ ಎಂದು 2-3 ಗಂಟೆ ವಿದ್ಯುತ್ ಪೂರೈಕೆ ಮಾಡುತ್ತಿದ್ದಾರೆ. ಆದರೆ ಮುಖ್ಯಮಂತ್ರಿ ಸ್ವಕ್ಷೇತ್ರ ವರುಣಾದಲ್ಲಿ 7 ಗಂಟೆ ಕರೆಂಟ್ ಕೊಡುತ್ತಿದ್ದಾರೆ. ಜಿಲ್ಲೆಯ 5 ತಾಲೂಕಿನಲ್ಲೂ ಒಂದು ಕಡೆ ಮಳೆ ಇಲ್ಲದೇ, ಮತ್ತೊಂದು ಕಡೆ ವಿದ್ಯುತ್ ಇಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮನವರಿಕೆ ಮಾಡಿಕೊಟ್ಟರು.

ಜಿಲ್ಲೆಯ ಕಾಡಂಚಿನ ಗ್ರಾವಗಳಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದೆ. ಬೆಳಿಗ್ಗೆ ಸಮಯದಲ್ಲಿ ಕರೆಂಟ್ ಕೊಡಬೇಕು ಎಂದು ಪ್ರತಿಭಟನೆ ಮಾಡಿದ ನಂತರ ನೀಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ರೈತರ ಜಮೀನುಗಳಿಗೆ ಭೇಟಿ ನೀಡಿಲ್ಲ. ಈ ಪ್ರದೇಶ ಹೆಚ್ಚು ಖುಷ್ಕಿ ಪ್ರದೇಶದಿಂದ ಕೂಡಿದೆ.ಆಗಾಗಿ ಸರ್ಕಾರ ಹೆಚ್ಚಿನ ಪರಿಹಾರವನ್ನು ನೀಡಬೇಕು. ಸಾವಯವ ಕೃಷಿ ಮಾಡುವವರಿಗೆ ಪ್ರೋತ್ಸಾಹ ಧನ ಹೆಚ್ಚು ಮಾಡಬೇಕು. ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ, ಕೆರೆಗಳು ಹೂಳು ಎತ್ತುವುದಕ್ಕೆ ಅವಕಾಶ ಮಾಡಿಕೊಡಬೇಕು. ಸೋಲಾರ್ ಅಳವಡಿಕೆ ವಿಕೇಂದ್ರೀಕರಣ ಮಾಡಬೇಕು, ರೈತರು ಬೆಳೆದ ಬೆಳೆಗಳಿಗೆ ಸಮರ್ಪಕ ಬೆಲೆ ನಿರ್ಧಾರ ಮಾಡಬೇಡಬೇಕು. ಕಾಡುಪ್ರಾಣಿಗಳ ಹಾವಳಿಯಿಂದ ನಅಶವಾಗುವ ಬೆಳೆಗಳಿಗೆ ಬೆಳೆ ನಷ್ಟ ಕಟ್ಟಿಕೊಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಶಾಸಕ ಶ್ರೀವತ್ಸ, ಮಾಜಿ ಶಾಸಕರಾದ ವಿಜಯ್ ಶಂಕರ್, ಎನ್.ಮಹೇಶ್, ಎಸ್.ಬಾಲರಾಜ್, ಸಿ.ಎಸ್.ನಿರಂಜನ್ ಕುಮಾರ್, ಡಾ.ನವೀನ್, ಡಾ.ರೇವಣ್ಣ, ಹರ್ಷವರ್ಧನ್, ರೈತಮುಖಂಡ ಅಮ್ಮನಪುರ ಮಲ್ಲೇಶ್, ಕುಂದಗೆರೆ ಸಂಪತ್ ಹಾಗೂ ಇತರರು ಭಾಗವಹಿಸಿದ್ದರು.