ಚಾಮರಾಜನಗರ: ತಾಲೂಕಿನ ದೇಮಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಗ್ರಾಮಸಭೆ ನಡೆಯಿತು.
ಈ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪುನೀತ್ ಮಾತನಾಡಿ, ಗ್ರಾಪಂ ವ್ಯಾಪ್ತಿಯ ವಾರ್ಡ್ ಸಭೆ ನಡೆಸಿ ಬಸವ ವಸತಿ ಯೋಜನೆಯಡಿ 41 ಮನೆಗಳು, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಯಡಿ 9 ಮನೆಗಳನ್ನು ಸದಸ್ಯರ ಸಮ್ಮುಖದಲ್ಲಿ ಅನುಮೋದನೆ ಮಾಡಲಾಗಿದೆ ಎಂದು ತಿಳಿಸಿದರು. ನೋಡಲ್ ಅಧಿಕಾರಿ ಪ್ರಭುಸ್ವಾಮಿ, ತಾಲೂಕು ಸಹಾಯ ನಿರ್ದೇಶಕ ಪ್ರಕಾಶ್, ಶಾಂತರಾಜು, ಪಿಡಿಒ ನಾಗಯ್ಯ, ಉಪಾಧ್ಯಕ್ಷೆ ರಾಜಮ್ಮ, ಕಾರ್ಯದರ್ಶಿ ಸುನೀಲ್ ಮತ್ತು ಸದಸ್ಯರು, ಗ್ರಾಮಸ್ಥರು ಇದ್ದರು.