ಜಿಲ್ಲೆ

ವಸತಿ ಯೋಜನೆಯ ಸದ್ಬಳಕೆ ಮಾಡಿಕೊಳ್ಳಿ

ಎ.ಎಸ್.ಮಣಿಕಂಠ

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆ ಹಾಗೂ ಬಸವ ವಸತಿ ಯೋಜನೆಯಡಿ 170 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆದಿಶೇಷಮೂರ್ತಿ ತಿಳಿಸಿದರು.

ತಾಲೂಕಿನ ಮಂಗಲ ಗ್ರಾಮ ಪಂಚಾಯಿತಿ ಆವರಣದಲ್ಲಿ 2024-25 ನೇ ಸಾಲಿನ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಕ್ರಿಯಾ ಯೋಜನೆ ತಯಾರಿ ಹಾಗೂ ವಸತಿ ಯೋಜನೆಗೆ ಆಯ್ಕೆ ಸಂಬಂಧ ಸೋಮವಾರ ಆಯೋಜಿಸಿದ್ದ ಗ್ರಾಮಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಈಗಾಗಲೇ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ 6 ಗ್ರಾಮಗಳಲ್ಲಿ ವಾರ್ಡ್ ಸಭೆ ಮಾಡಿ ಪ್ರತಿಯೊಂದು ವಾರ್ಡ್‌ನಲ್ಲಿ ಸಮಸ್ಯೆಗಳ ಪಟ್ಟಿ ಮಾಡಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗಿದೆ. ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಪಲಾನುಭವಿಗಳ ಪಟ್ಟಿ ತಯಾರಾಗಿ ಗ್ರಾಮ ಸಭೆಯಲ್ಲಿ ಫಲನುಭವಿಗಳ ಹೆಸರನ್ನು ಅಧಿಕೃತವಾಗಿ ತಿಳಿಸಲಾಗಿದೆ. ನರೇಗಾ ಯೋಜನೆಯಡಿ ಬರುವಂತಹ ಎಲ್ಲಾ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸಿ ಗ್ರಾಮದ ಅಭಿವೃದ್ಧಿಗೆ ಮುಂದಾಗೋಣ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ವತಿಯಿಂದ ಒಟ್ಟು 170 ಮನೆಗಳ ಪಟ್ಟಿ ತಯಾರಾಗಿದ್ದು, ಅದರಲ್ಲಿ ಬಸವ ವಸತಿ ಯೋಜನೆಯಡಿಯಲ್ಲಿ 150 ಮನೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಯಡಿಯಲ್ಲಿ 20 ಮನೆ ನಿರ್ಮಾಣ ಮಾಡಲು ವಾರ್ಡ್ ಸಭೆಯಲ್ಲಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಲಾಗಿದೆ. ಅರ್ಹ ಫಲಾನುಭವಿಗಳು ಆದಷ್ಟು ಬೇಗ ಮನೆ ನಿರ್ಮಾಣ ಮಾಡಲು ಮುಂದಾಗಬೇಕು. ಯಾವುದಾದರು ಕೈ ಬಿಟ್ಟಿದ್ದಾರೆ ಆ ಫಲಾನುಭವಿ ಹೆಸರನ್ನು ಸೇರಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಎಸ್.ಅಣ್ಣಪ್ಪ ಸ್ವಾಮಿ, ಸೋಮಣ್ಣ, ಉಪಾಧ್ಯಕ್ಷೆ ಪ್ರೇಮಾ, ಸದಸ್ಯರಾದ ಮಂಜುನಾಥ್, ಸುರೇಶ್, ಎಂ.ಮಹೇಶ್, ಮಹಾದೇವಮ್ಮ, ರಾಜಶೇಖರ್, ಶಶಿಧರ್, ಮಹಾದೇವಯ್ಯ, ಚೈತನ್ಯ, ಸುಧಾಕುಮಾರ್, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾ.ಪಂ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.