ಜಿಲ್ಲೆ

ದಿನಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಿ

ಎ.ಎಸ್.ಮಣಿಕಂಠ

ಚಾಮರಾಜನಗರ: ನಂ.1 ಕನ್ನಡ ದಿನಪತ್ರಿಕೆ ವಿಜಯವಾಣಿ ಆಯೋಜಿಸಿದ್ದ ‘ನಾರಿ ನಿನಗೊಂದು ಸ್ಯಾರಿ’ ಸ್ಪರ್ಧೆಯ ಲಕ್ಕಿ ಡ್ರಾ ಕಾರ್ಯಕ್ರಮ ಜಿಲ್ಲೆಯಾದ್ಯಂತ ನಡೆದು, ಅದೃಷ್ಟವಂತ ವಿಜೇತರನ್ನು ಆಯ್ಕೆಮಾಡಲಾಯಿತು.

ಜಿಲ್ಲೆಯ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಹನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಾಲ್ಕು ಕಡೆಗಳಲ್ಲಿ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಲಕ್ಕಿ ಡ್ರಾ ಮಾಡುವ ಮೂಲಕ ತಳ 5 ಜನ ಅದೃಷ್ಟವಂತರ ಹೆಸರು ಘೋಷಣೆ ಮಾಡಿದರು.

ಚಾಮರಾಜನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲಕ್ಕಿ ಡಿಪ್ ಎತ್ತುವ ಮೂಲಕ ನಗರಸಭಾ ಸದಸ್ಯ ಕಲಾವತಿ ರವಿಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿ, ಪ್ರತಿಯೊಬ್ಬ ಮಹಿಳೆಯರಿಗೂ ಸೀರೆ ಅಂದರೆ ಬಹಳ ಇಷ್ಟ. ಯಾವುದೇ ಸಮಾರಂಭವಾದರೂ ಅಲ್ಲಿಗೆ ಹೋಗಲು ನಾವು ಸೀರೆಗೆ ಹೆಚ್ಚಿನ ಪ್ರಾಧಾನ್ಯತೆ ಕೊಡುತ್ತೇವೆ. ಅಂತೆಯೇ ದಿನಪತ್ರಿಕೆಗಳಿಗೂ ವಿದ್ಯಾರ್ಥಿಗಳು ಹೆಚ್ಚಿನ ಪ್ರಾಶಸ್ತ ನೀಡಿದರೆ ಉತ್ತಮವಾದ ಕಲಿಕೆಗೆ ನೆರವಾಗುತ್ತದೆ. ಉನ್ನತ ಹುದ್ದೆಗಳನ್ನು ಪಡೆಯಲು ಸಹಕಾರಿಯಾಗುತ್ತದೆ ಎಂದು ಸಲಹೆ ನೀಡಿದರು.

ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಸಿ.ಶೈಲೇಶ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳ ಬೌದ್ಧಿಕ ವಿಕಾಸಕ್ಕೆ ದಿನಪತ್ರಿಕೆಗಳು ಅತ್ಯಂತ ಸಹಕಾರಿಯಾಗಿದೆ. ಜ್ಞಾನದ ಅರಿವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪತ್ರಿಕೆಗಳು ಅನುಕೂಲವಾಗುತ್ತದೆ. ಇಂತಹ ಕಾರ್ಯಕ್ರಮಗಳ ಮೂಲಕ ಮಹಿಳೆಯರನ್ನು ಅದರಲ್ಲೂ ವಿದ್ಯಾರ್ಥಿಗಳನ್ನು ಪತ್ರಿಕೆ ಓದುವಂತೆ ಮಾಡಬಹುದು. ಈ ಮೂಲಕ ಅವರಲ್ಲಿ ಹೊಸ ಚಿಂತನೆ, ಸಕಾರಾತ್ಮಕ ಪ್ರತಿಕ್ರಿಯೆ ಹಾಗೂ ಸಮಾಜದಲ್ಲಿನ ನ್ಯೂನ್ಯತೆಗಳನ್ನು ಗುರುತಿಸುವಂತೆ ಮಾಡಬಹುದು. ಎಲ್ಲಕ್ಕಿಂತಲೂ ಮುಖ್ಯವಾಗಿ ಸದೃಢ ದೇಶ ಕಟ್ಟುವ ಕೆಲಸದಲ್ಲಿ ದಿನಪತ್ರಿಕೆಗಳ ಸಾಂಗತ್ಯ ಪ್ರತಿಯೊಬ್ಬರಿಗೂ ಅಗತ್ಯವಾಗಿದೆ ಎಂದು ತಿಳಿಸಿದರು.

ದೈಹಿಕ ಶಿಕ್ಷಣ ನಿರ್ದೇಶಕ ಡಾ.ಶಾಂತರಾಜು ಮಾತನಾಡಿ, ಸದೃಢ ದೇಶವನ್ನು ನಿರ್ಮಾಣ ಮಾಡುವಲ್ಲಿ ಪತ್ರಿಕಾ ಮಾಧ್ಯಮದ ಪಾತ್ರ ಅಪಾರವಾಗಿದೆ. ತನ್ನ ಗುಣಮಟ್ಟದ ಲೇಖನಗಳು ಮತ್ತು ವಸ್ತುನಿಷ್ಠವಾದ ವರದಿಗಳಿಂದ ವಿಜಯವಾಣಿ ದಿನಪತ್ರಿಕೆ ನಂ.1 ಸ್ಥಾನವನ್ನು ಕಾಯ್ದುಕೊಂಡಿದೆ. ದಿನಪತ್ರಿಕೆಗಳು ಸರ್ಕಾರ ಮತ್ತು ಶ್ರೀಸಾಮಾನ್ಯರ ನಡುವಿನ ಕೊಂಡಿಯಂತೆ ಕೆಲಸ ಮಾಡುತ್ತದೆ. ವಿದ್ಯಾರ್ಥಿಗಳು ನಿತ್ಯವೂ ದಿನಪತ್ರಿಕೆಗಳನ್ನು ಓದುವ ಮೂಲಕ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬಹುದು. ಐಎಎಸ್, ಐಪಿಎಸ್, ಕೆಎಎಸ್ ಹಾಗೂ ಇನ್ನಿತರೆ ಉನ್ನತ ಹುದ್ದೆಗಳಿಗೆ ಹೋಗುವ ಕನಸು ಹೊಂದಿರುವವರು ದಿನಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮೈಸೂರು ವಿಭಾಗದ ಸ್ಥಾನೀಕ ಸಂಪಾದಕ ಎಂ.ಆರ್.ಸತ್ಯನಾರಾಯಣ್ ಮಾತನಾಡಿ, ಮಹಿಳೆಯರನ್ನು ಎಲ್ಲಕ್ಕಿಂತಲೂ ಹೆಚ್ಚಾಗಿ ವಿದ್ಯಾರ್ಥಿಗಳನ್ನು ಅಕ್ಷರ ಸಂಸ್ಕೃತಿಗೆ ಹಿಂದಿರುಗಿಸುವ ಪ್ರಯತ್ನವಾಗಿ ವಿಜಯವಾಣಿ ದಿನಪತ್ರಿಕೆ ಇಂತಹ ಕಾರ್ಯಕ್ರಮವನ್ನು ಆಯೋಜಿಸಿದೆ. ಮಹಿಳೆಯರ ಭಾಗವಹಿಸುವಿಕೆ ಪತ್ರಿಕೆಗಳ ಮೇಲಿನ ಆಸಕ್ತಿಯನ್ನು ತೋರಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಅರ್ಥಶಾಸ ವಿಭಾಗದ ಮುಖ್ಯಸ್ಥೆ ಡಾ.ಎಂ.ಸಿ. ಪ್ರಭಾವತಿ, ವಾಣಿಜ್ಯಶಾಸ ವಿಭಾಗದ ಮುಖ್ಯಸ್ಥೆ ದೀಪಾ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜೇತರ ವಿವರ:
ಚಾಮರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸುವರ್ಣ ರಾಮಸಮುದ್ರ, ಎನ್.ಕಾಮಾಕ್ಷಿ ಬಂಡಿಗೆರೆ-ಹರದನಹಳ್ಳಿ, ನಾಗರತ್ನಮ್ಮ 15ನೇ ವಾರ್ಡ್, ದಾಕ್ಷಾಯಿಣಿ ಉಪ್ಪಾರ ಬಡಾವಣೆ ಆಲೂರು, ಶ್ವೇತಾ ಉಡಿಗಾಲ