ಜಿಲ್ಲೆ

ಕರ್ನಾಟಕ ಸೇನಾಪಡೆ ವತಿಯಿಂದ ಪ್ರತಿಭಟನೆ

ಎ.ಎಸ್.ಮಣಿಕಂಠ

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಲಾಯಿತು.

ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಸೋಮವಾರ ಸೇರಿದ ಪ್ರತಿಭಟನಾಕಾರರು, ಅಲ್ಲಿಂದ ಮೆರವಣಿಗೆ ಹೊರಟು ಶ್ರೀಭುವನೇಶ್ವರಿ ವೃತ್ತಕ್ಕೆ ತೆರಳಿ ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕೇಂದ್ರ ಸರ್ಕಾರ ಕಾವೇರಿ ನೀರು ನಿರ್ವಹಣಾ ಸಮಿತಿಯನ್ನು ಕೂಡಲೇ ವಜಾಮಾಡಬೇಕು. ಇಲ್ಲದಿದ್ದರೆ ಕರ್ನಾಟಕ ರಾಜ್ಯಕ್ಕೆ ನ್ಯಾಯ ಸಿಗೋದಿಲ್ಲ. ರಾಜ್ಯದ ಸಂಸದರು ಪಕ್ಷಬೇಧ ಮರೆತು ಕಾವೇರಿ ವಿಚಾರದಲ್ಲಿ ಹೋರಾಟ ಮಾಡಬೇಕು. ರಾಜ್ಯ ಸರ್ಕಾರಕ್ಕೆ ನಿಜವಾಗಲೂ ನೈತಿಕತೆ ಇದ್ದರೆ ಕಾವೇರಿ ನೀರು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಶಾ.ಮುರಳಿ, ಚಾ.ವೆಂ.ರಾಜ್‌ಗೋಪಾಲ್, ಗು.ಪುರುಷೋತ್ತಮ್, ಸಾಗರ್‌ರಾವತ್, ವೀರಭದ್ರ, ಲಿಂಗರಾಜು, ತಾಂಡವಮೂರ್ತಿ, ಪ್ರಕಾಶ್, ಚಾ.ಸಿ.ಸಿದ್ದರಾಜು ಇತರರು ಭಾಗವಹಿಸಿದ್ದರು.