ಜಿಲ್ಲೆ

ಲಯನ್ಸ್ ಸಂಸ್ಥೆ ಸಾಮಾಜಿಕ ಸೇವೆ ಅಪಾರ

ಚಾಮರಾಜನಗರ: ನಗರದಲ್ಲಿ ಸುಮಾರು 42 ವರ್ಷಗಳಿಂದಲೂ ಕಾರ್ಯ ನಿರ್ವಹಿಸುತ್ತಿರುವ ಲಯನ್ಸ್ ಸಂಸ್ಥೆಯ ಸಾಮಾಜಿಕ ಸೇವೆ ಅಪಾರ ಎಂದು ಪ್ರಭುಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ಲಯನ್ಸ್ ಸಂಸ್ಥೆ ಹಾಗೂ ಕೊಯಮತ್ತೂರು ಅರವಿಂದ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಬೃಹತ್ ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಲಯನ್ಸ್ ಸಂಸ್ಥೆಯಿಂದ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ. 10 ದಿನಗಳಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರದ ಕುರಿತು ಪ್ರಚಾರ ಮಾಡಿರುವುದರಿಂದ 500 ಕ್ಕಿಂತಲೂ ಹೆಚ್ಚು ಜನರು ಶಿಬಿರದಲ್ಲಿ ಕಣ್ಣಿನ ತಪಾಸಣೆಗೆ ಆಗಮಿಸಿದ್ದು, ಅದರಲ್ಲಿ 100-120 ಜನರನ್ನು ಶಸ ಚಿಕಿತ್ಸೆಗೆ ಕೊಯಮತ್ತೂರಿಗೆ ಕರೆದುಕೊಂಡು ಹೋಗಲಾಗುತ್ತದೆ. ಪ್ರತಿಯೊಬ್ಬರಿಗೂ ಉಚಿತವಾಗಿ ಪ್ರಯಾಣ, ಊಟ ಹಾಗೂ ಚಿಕಿತ್ಸೆ ನೀಡಲಾಗುತ್ತದೆ ಎಂದರು. ಲಯನ್ಸ್ ಸಂಸ್ಥೆ ಅಧ್ಯಕ್ಷ ಪ್ರಕಾಶ್ ಜೈನ್, ಸಮಾಜ ಸೇವಕ ಡಾ.ಪರಮೇಶ್ವರ್, ಅರವಿಂದ ಕಣ್ಣಿನ ಆಸ್ಪತ್ರೆಯ ಪಿಆರ್‌ಒ ಡಾ.ವಿಜಯಕಾಂತ್, ಡಾ.ಚಿನ್ನಮಣಿ, ಡಾ.ವಿಕ್ರಮ್ ಇತರರು ಇದ್ದರು.