ಚಾಮರಾಜನಗರ : ರಾಜ್ಯ ಯುವ ಸಂಘಗಳ ಒಕ್ಕೂಟ ನೀಡುವ 2023-24ನೇ ಸಾಲಿನ ರಾಜ್ಯ ಯುವ ಪ್ರಶಸ್ತಿಗೆ ಹೆಗ್ಗೋಠಾರ ಗ್ರಾಮದ ದೊಡ್ಡ ಸಿದ್ದನಾಯ್ಕ ಆಯ್ಕೆಯಾಗಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ತರೀಕೆರೆ ಗ್ರಾಮದಲ್ಲಿ ಡಿ.30ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಜ್ಯ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ. ಎಸ್.ಬಾಲಾಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.