ಜಿಲ್ಲೆ

ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಕಡ್ಡಾಯ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ವೃದ್ಧಾಪ್ಯ, ಸಂಧ್ಯಾ ಸುರಕ್ಷಾ, ವಿಧವಾ, ಅಂಗವಿಕಲ, ಮೈತ್ರಿ, ಮನಸ್ವಿನಿ ಹಾಗೂ ಇತರ ಮಾಸಿಕ ಪಿಂಚಣಿಯನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ (ಎನ್.ಪಿ.ಸಿ.ಐ) ಇವರ ಮೂಲಕ ಆಧಾರ್ ಆಧಾರಿತ ಪಿಂಚಣಿ ಪಾವತಿ ಮಾಡಲು ಸರ್ಕಾರ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಆಧಾರ್ ನಂಬರನ್ನು ಬ್ಯಾಂಕ್ ಅಥವಾ ಅಂಚೆ ಕಚೇರಿಯ ಖಾತೆಗೆ ತಕ್ಷಣವೇ ಲಿಂಕ್ ಮಾಡಿಸಿಕೊಳ್ಳಲು ತಿಳಿಸಲಾಗಿದೆ. ಕಡ್ಡಾಯವಾಗಿ ಜುಲೈ 3 ರೊಳಗಾಗಿ ತಪ್ಪದೆ ಪಿಂಚಣಿ ಜಮಾ ಆಗುವ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಖಾತೆಗೆ ಆಧಾರ್ ನಂಬರ್ ಲಿಂಕ್ ಮಾಡಿಸಬೇಕು. ತಪ್ಪಿದ್ದಲ್ಲಿ ಪಿಂಚಣಿ ಸ್ಥಗಿತಗೊಳ್ಳಬಹುದೆಂದು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.