ಜಿಲ್ಲೆ

ಸಿಎಂ ಸಿದ್ದರಾಮಯ್ಯ ಭೇಟಿ ಹಿನ್ನೆಲೆ ಭರದ ಸಿದ್ಧತೆ

ಎ.ಎಸ್.ಮಣಿಕಂಠ

ಚಾಮರಾಜನಗರ: ಜಿಲ್ಲೆಯಲ್ಲಿ ಮಾ.12 ರಂದು ಆಯೋಜಿಸಿರುವ ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಲಾನುಭವಿಗಳ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಲು ಮುಖ್ಯ ಸಿದ್ದರಾಮಯ್ಯ ಆಗಮಿಸುವ ಹಿನ್ನೆಲೆಯಲ್ಲಿ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಕಾರ್ಯಕ್ರಮಕ್ಕಾಗಿ ಬೃಹತ್ ಶಾಮಿಯಾನವನ್ನು ಹಾಕಲಾಗುತ್ತಿದೆ. ಸುಮಾರು 30 ಸಾವಿರಕ್ಕಿಂತಲೂ ಹೆಚ್ಚು ಜನ ಲಾನುಭವಿಗಳು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಆಸನದ ವ್ಯವಸ್ಥೆ ಮಾಡಲಾಗುತ್ತಿದೆ. ಕಾರ್ಯಕ್ರಮದ ವೇಳೆಯಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಕ್ರೀಡಾಂಗಣದಲ್ಲಿ ಮರಗಳನ್ನು ನೆಡಲಾಗುತ್ತಿದೆ. 50 ಕ್ಕೂ ಹೆಚ್ಚು ಜನರು ಭಾನುವಾರ ದಿನವಿಡೀ ನಿರಂತರವಾಗಿ ಕೆಲಸ ಮಾಡುತ್ತಿದ್ದು, ಭರದಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಇನ್ನಿತರೆ ಸಚಿವರು ಆಗಮಿಸುವ ಹಿನ್ನೆಲೆಯಲ್ಲಿ ಎಲಿಪ್ಯಾಡ್ ನಿರ್ಮಾಣ ಮಾಡಲಾಗುತ್ತಿದೆ. ಕ್ರೀಡಾಂಗಣದ ಪ್ರಮುಖ ರಸ್ತೆಗಳಲ್ಲಿ ನೂರಾರು ಬ್ಯಾರಿಕೇಡ್‌ಗಳನ್ನು ತಂದು ಇರಿಸಲಾಗಿದೆ. ಒಟ್ಟಾರೆಯಾಗಿ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಲಾನುಭವಿಗಳ ಜಾಗೃತಿ ಸಮಾವೇಶಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ನಗರಸಭೆ ವತಿಯಿಂದ ಸ್ವಚ್ಛತಾ ಕಾರ್ಯ:
ಸಿಎಂ ಮತ್ತು ಡಿಸಿಎಂ ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ನಗರಸಭೆ ವತಿಯಿಂದ ಸ್ವಚ್ಚತಾ ಕಾರ್ಯವನ್ನು ನಡೆಸಲಾಗುತ್ತಿದೆ. ನಗರದ ರಾಷ್ಟ್ರೀಯ ಹೆದ್ದಾರಿ 209 ರ ಪುಟ್ಟಮ್ಮಣಿ ಉದ್ಯಾನವನ, ಸಂತೇಮರಹಳ್ಳಿ ವೃತ್ತ, ಡಿವಿಯೇಷನ್ ರಸ್ತೆ, ಎಲ್‌ಐಸಿ ವೃತ್ತ, ರೈತನಾಯಕ ನಂಜುಂಡಸ್ವಾಮಿ ರಸ್ತೆ, ಕಾರ್ಯಕ್ರಮ ನಡೆಯುವ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆ, ಖಾಸಗಿ ಬಸ್ ನಿಲ್ದಾಣ ಹಾಗೂ ಇನ್ನಿತರೆ ಪ್ರಮುಖ ರಸ್ತೆಗಳನ್ನು ಪೌರಕಾರ್ಮಿಕರು ಬಿಸಿಲನ್ನು ಲೆಕ್ಕಿಸದೇ ಸ್ವಚ್ಛಗೊಳಿಸುತ್ತಿದ್ದರು. ಕಾರ್ಯಕ್ರಮಕ್ಕೆ ಆಗಮಿಸುವ ಲಾನುಭವಿಗಳು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರು, ಮೊಬೈಲ್ ಶೌಚಾಲಯ ವ್ಯವಸ್ಥೆ ಹಾಗೂ ಇನ್ನಿತರೆ ಸಿದ್ಧತೆಗಳನ್ನು ನಗರಸಭೆ ವತಿಯಿಂದ ಮಾಡಿಕೊಳ್ಳಲಾಗುತ್ತಿದೆ ಎಂದು ನಗರಸಭೆ ಪೌರಾಯುಕ್ತ ರಾಮದಾಸ್ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ್, ಮಲ್ಲಿಕಾರ್ಜುನ, ಚೇತನ್ ಇತರರು ಹಾಜರಿದ್ದರು.

ರಾರಾಜಿಸುತ್ತಿರುವ ್ಲೆಕ್ಸ್‌ಗಳು:
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಇನ್ನಿತರೆ ಸಚಿವರನ್ನು ಸ್ವಾಗತಿಸುವ ್ಲೆಕ್ಸ್‌ಗಳು ಭಾನುವಾರವೇ ಪ್ರಮುಖ ರಸ್ತೆ ಮತ್ತು ವೃತ್ತಗಳಲ್ಲಿ ರಾರಾಜಿಸುತ್ತಿದ್ದವು. ನಗರದ ಶ್ರೀಭುವನೇಶ್ವರಿ ವೃತ್ತ, ಸಂತೇಮರಹಳ್ಳಿ ವೃತ್ತ, ಎಲ್‌ಐಸಿ ವೃತ್ತ ಹಾಗೂ ಇನ್ನಿತರೆ ಪ್ರಮುಖ ರಸ್ತೆಗಳಲ್ಲಿ ಕಾಂಗ್ರೆಸ್ ನಾಯಕರಿಗೆ ಶಾಸಕ ಪುಟ್ಟರಂಗಶೆಟ್ಟಿ ಸ್ವಾಗತ ಕೋರುತ್ತಿರುವ ಬೃಹತ್ ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು. ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಹಾಗೂ ಇನ್ನಿತರೆ ಮುಖಂಡರು ಕೂಡ ್ಲೆಕ್ಸ್‌ಗಳನ್ನು ಅಳವಡಿಸಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದರು. ಒಟ್ಟಾರೆಯಾಗಿ ಸಿಎಂ ಕಾರ್ಯಕ್ರಮದಂದು ನಗರ ್ಲೆಕ್ಸ್‌ಮಯ ಆಗುವುದರಲ್ಲಿ ಅನುಮಾನವಿಲ್ಲ ಎಂಬ ಮಾತುಗಳು ಸಾರ್ವಜನಿಕರಿಂದ ಕೇಳಿಬಂದಿತು.