ಜಿಲ್ಲೆ

ಶಾಸಕ ಕೃಷ್ಣಮೂರ್ತಿ ಅವರಿಂದ ಎಂಎಲ್‌ಸಿ ಕಚೇರಿ ಉದ್ಘಾಟನೆ

ಎ.ಎಸ್.ಮಣಿಕಂಠ

ಚಾಮರಾಜನಗರ: ನಗರ ಜಿಲ್ಲಾಡಳಿತ ಭವನದ ಮೊದಲನೆಯ ಅಂತಸ್ತಿನ ಕೊಠಡಿ ಸಂಖ್ಯೆ 112ರಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಡಿ.ತಮ್ಮಯ್ಯ ಅವರ ಕಚೇರಿಯನ್ನು ಕೊಳ್ಳೇಗಾಲ ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಉದ್ಘಾಟಿಸಿ ಶುಭಕೋರಿದರು.

ಕಾಡಾಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ. ಉಪಾಧ್ಯಕ್ಷ ಬಿ.ಕೆ.ರವಿಕುಮಾರ್,  ಪ್ರಧಾನ ಕಾರ್ಯದರ್ಶಿ  ಆರ್.ಮಹದೇವು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೊಂಗನೂರು ಚಂದ್ರು, ತೋಟೇಶ್, ಮಹಮ್ಮದ್ಅಸ್ಕರ್, ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ಎಂ.ಶಿವಮೂರ್ತಿ, ನಂಜದೇವನಪುರ ಗ್ರಾ.ಪಂ.ಅಧ್ಯಕ್ಷ ಪಿ.ಶೇಖರ್, ಹೆಡತಲೆ ಲಿಂಗರಾಜು, ಕುಮಾರ್, ನಿಟ್ರಿ ಮಹದೇವು. ಸಿದ್ದು, ರಾಚಯ್ಯ, ಶಂಕರ್, ರಾಚಯ್ಯ, ವರಸಿಂಹ, ನಾಗಯ್ಯ, ಮಟ್ಟಲಿಂಗಯ್ಯ ಸೋಮು, ಬಾಲರಾಜ್ ಇನ್ನಿತರ ಮು ಭಾಗವಹಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಮಾತನಾಡಿ, ಮೈಸೂರು, ಚಾಮರಾಜನಗರ ಜಿಲ್ಲೆಗಳು ಬರುವುದರಿಂದ ಚಾಮರಾಜನಗರ ಜಿಲ್ಲೆಯ ಸಾರ್ವಜನಿಕರ ಆಹವಾಲು ಸ್ವೀಕರಿಸಲು ಆಗುತ್ತಿರಲಿಲ್ಲ. ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ತಮ್ಮ ಕಚೇರಿ ಆರಂಭವಾಗಿರುವುದರಿಂದ ಜಿಲ್ಲೆಯ ಸಾರ್ವಜನಿಕರ ಸೇವೆ ಮಾಡಲು ಮತ್ತಷ್ಟು ಅನುಕೂಲವಾಗಿದೆ. ಜಿಲ್ಲಾಡಳಿತ ಭವನದಲ್ಲಿ ಈಗ ತಮಗೆ ಹೊಸ ಕಚೇರಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್‌ರವರು, ಜಿಲ್ಲೆಯ ಶಾಸಕರು ಒದಗಿಸಿಕೊಟ್ಟಿದ್ದಾರೆ. ಇದಕ್ಕೆ ಅವರಿಗೆ ಈ ಮೂಲಕ ಅಭಿನಂದನೆ ಸಲ್ಲಿಸಲಾಗುವುದು. ಮುಂದೆ ಜಿಲ್ಲೆಯ ಸಾರ್ವಜನಿಕರು ಕಚೇರಿಗೆ ಆಗಮಿಸಿ ತಮ್ಮ ಆಹವಾಲುಗಳನ್ನು ಸಲ್ಲಿಸಬಹುದು ಎಂದರು. .