ಜಿಲ್ಲೆ

ಪ್ರತಿಭಟನೆಗಿಳಿದ ಬಿಜೆಪಿ ಮುಖಂಡರ ಬಂಧನ, ಬಿಡುಗಡೆ

ಕಿರಣ್ ಮಾದರಹಳ್ಳಿ

ಚಾಮರಾಜನಗರ: ರಾಜ್ಯ ಸರ್ಕಾರ ಬರ ಪರಿಸ್ಥಿತಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ ಮಾಡಲು ದುಂದು ವೆಚ್ಚ ಮಾಡುತ್ತಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ೇರಾವ್ ಹಾಕಲು ಪ್ರತಿಭಟನೆ ಮಾಡುತ್ತಿದ್ದ ಬಿಜೆಪಿ ಮುಖಂಡರನ್ನು ಮಂಗಳವಾರ ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು.

ನಗರದ ಸಂತೇಮರಹಳ್ಳಿ ವೃತ್ತದಲ್ಲಿ ಗುಂಪುಗೂಡಿದ ಪ್ರತಿಭಟನಾಕಾರರು ಪ್ರತಿಭಟನೆ ಶುರು ಮಾಡುವ ಮೊದಲೇ ಪೊಲೀಸರು ಬಂಧಿಸಿದರು. ಈ ವೇಳೆ ಮುಖಂಡರೊಂದಿಗೆ ಬಂಧನಕ್ಕೊಳಗಾದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಿ.ಬಿ.ಸೂರ್ಯಕುಮಾರ್ ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಕೂಗಿದರು. ಸರ್ಕಾರದ ಕೈಗೊಂಬೆಯಂತೆ ಪೊಲೀಸರು ವರ್ತಿಸುತ್ತಿದ್ದಾರೆಂದು ೋಷಣೆ ಕೂಗಿದರು. ನಂತರ ಮುಖಂಡರನ್ನು ಬಂಧಿಸಿ ಬಳಿಕ ಬಿಡುಗಡೆ ಮಾಡಲಾಯಿತು.

ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆನಂದ್ ಭಗೀರಥ, ಸಂಶೋಧನಾ ವಿಭಾಗದ ಸಂಚಾಲಕ ಪ್ರಣಯ್, ಸೋಮವಾರಪೇಟೆ ಗುರು, ಕೂಸಣ್ಣ, ರಾಜು, ಮಹೇಶ್, ರಾಘವೇಂದ್ರ ನಾಯಕ್ ಮತ್ತು ಇತರರು ಭಾಗವಹಿಸಿದ್ದರು.