ಚಾಮರಾಜನಗರ: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.90ಕ್ಕಿಂತ ಅಧಿಕ ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ವತಿಯಿಂದ ಜೂ.25ರಂದು ನಗರದಲ್ಲಿ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಮೋಹನ್ ತಿಳಿಸಿದರು.
ಅಂದು ನಗರದ ಡಾ.ರಾಜ್‌ಕುಮಾರ್ ರಂಗಮಂದಿರದಲ್ಲಿ ಬೆಳಗ್ಗೆ 10.30ಕ್ಕೆ ಆರಂಭವಾಗಲಿರುವ ಕಾರ್ಯಕ್ರಮವನ್ನು ನಗರದ ಸಿದ್ದಮಲ್ಲೇಶ್ವರ ವಿರಕ್ತ ಮಠದ ಶ್ರೀ ಚನ್ನಬಸವ ಸ್ವಾಮೀಜಿ, ನಳಂದ ಬೌದ್ಧ ವಿಶ್ವವಿದ್ಯಾಲಯದ ಬೋಧಿದತ್ತ ತೇರ, ಸಂತ ್ರಾಸ್ಸಿಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಭಾಕರ್ ಸಾನ್ನಿಧ್ಯ ವಹಿಸುವರು.
ಪಶು ಸಂಗೋಪನಾ, ರೇಷ್ಮೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ, ಗುಂಡ್ಲುಪೇಟೆ ಶಾಸಕ ಎಚ್.ಎಂ. ಗಣೇಶ್‌ಪ್ರಸಾದ್ ಭಾಗವಹಿಸುವರು. ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಎ.ರಫೀಕ್ ಅಲಿ ವಿಚಾರ ಮಂಡನೆ ಮಾಡುವರು. ಐಎಎಸ್ ತರಬೇತುದಾರರಾದ ಮೋಹನ್, ನಂದೀಶ್ ಮುಖ್ಯಭಾಷಣ ಮಾಡುವರು.
ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ, ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಎನ್‌ಎಸ್‌ಯುಐ ಅಧ್ಯಕ್ಷ ಕೀರ್ತಿ ಗಣೇಶ್ ಭಾಗವಹಿಸುವರು. ಸಮಾರಂಭದಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದರು.
ಜಿಲ್ಲಾ ಕಾಂಗ್ರೆಸ್ ಮಾಧ್ಯಮ ಕಾರ್ಯದರ್ಶಿ ಅರುಣ್‌ಕುಮಾರ್, ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಾಗೇಂದ್ರ ನಾಯಕ, ಎನ್‌ಎಸ್‌ಯುಐ ಉಪಾಧ್ಯಕ್ಷ ಬಾಲರಾಜು, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಅಕ್ಷಯ್‌ಕುಮಾರ್, ತಾಲೂಕು ಅಧ್ಯಕ್ಷ ಮುತ್ತುರಾಜು ಇದ್ದರು.