ಚಾಮರಾಜನಗರ: ಜಿಲ್ಲೆಯ ವಿವಿಧ ಕಡೆಗಳಲ್ಲಿ ಗುರುವಾರ ಮಳೆ ಸುರಿಯಿತು. ಚಾಮರಾಜನಗರ, ಗುಂಡ್ಲುಪೇಟೆ, ಯಳಂದೂರಿನಲ್ಲಿ ಸಾಧಾರಣ ಮಳೆಯಾಯಿತು. ಚಾಮರಾಜನಗರ, ಗುಂಡ್ಲುಪೇಟೆಯಲ್ಲಿ ಮುಂಜಾನೆಯಿಂದಲೇ ತುಂತುರು ಮಳೆ ಹಾಗೂ ಮೋಡ ಕವಿದ ವಾತಾವರಣ, ಚಳಿ ಇತ್ತು. ಚಾಮರಾಜನಗರದಲ್ಲಿ ಮಧ್ಯಾಹ್ನದ ವೇಳೆಗೆ ಅರ್ಧ ಗಂಟೆ ಜೋರು ಮಳೆ ಸುರಿಯಿತು. ಈ ಹಿನ್ನೆಲೆಯಲ್ಲಿ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಚರಂಡಿ ನೀರು ರಸ್ತೆಗೆ ಹರಿಯಿತು. ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಚರಂಡಿ ಪೈಪ್ ಕತ್ತರಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಿದರು. ಆದರೆ, ಹನೂರು, ಕೊಳ್ಳೇಗಾಲದಲ್ಲಿ ಸಂಜೆವರೆಗೂ ಮಳೆ ಬೀಳಲಿಲ್ಲ.