ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಮೇ 26ರಂದು ಜಿಲ್ಲಾ ಮಟ್ಟದ ಜಲಸಾಹಸ ಕ್ರೀಡೆ ಕಾರ್ಯಕ್ರಮವನ್ನು ಬೆಳಗ್ಗೆ 10.30 ಗಂಟೆಗೆ ಚಾಮರಾಜನಗರ ತಾಲೂಕಿನ ಅಟ್ಟುಗೂಳಿಪುರದ ಸುವರ್ಣಾವತಿ ಜಲಾಶಯದಲ್ಲಿ ಆಯೋಜಿಸಲಾಗಿದೆ.
ಶಾಸಕ ಸಿ. ಪುಟ್ಟರಂಗಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸುವರು. ಸಂಸದ ವಿ.ಶ್ರೀನಿವಾಸಪ್ರಸಾದ್ ಉಪಸ್ಥಿತರಿರುವರು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್‌ಪ್ರಸಾದ್, ಎಂ.ಆರ್. ಮಂಜುನಾಥ್, ಮರಿತಿಬ್ಬೇಗೌಡ, ಡಿ.ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಅಟ್ಟುಗೂಳಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿ. ವಿಮಲಾ, ಉಪಾಧ್ಯಕ್ಷ ಎಸ್. ಮರಿಸ್ವಾಮಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.