ಚಾಮರಾಜನಗರ: ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕೆರೆಹಳ್ಳಿ ಮಹದೇವಸ್ವಾಮಿ ಅವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಜಿ. ನಾರಾಯಣಪ್ರಸಾದ್ ಶುಕ್ರವಾರ ಆದೇಶ ಪ್ರತಿ ನೀಡಿದರು.
ನಗರದ ನೂತನ ಬಿಜೆಪಿ ಕಚೇರಿಯಲ್ಲಿ ನಡೆದ ಪದಾಕಾರಿಗಳ ಸಭೆಯ ಬಳಿಕ ಆದೇಶ ಪತ್ರ ನೀಡಿ, ಮಹದೇವಸ್ವಾಮಿ ಅವರು ಕಳೆದ 16 ವರ್ಷಗಳಿಂದ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ದುಡಿಯುತ್ತಿದ್ದಾರೆ. ಪಕ್ಷದ ವರಿಷ್ಠರು ವಹಿಸಿದ ಜವಾಬ್ದಾರಿಯನ್ನು ಬಹಳ ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ಶಿಸ್ತಿನ ಸಿಪಾಯಿ ಎನಿಸಿಕೊಂಡಿದ್ದಾರೆ ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆರೆಹಳ್ಳಿ ಮಹದೇವಸ್ವಾಮಿ ಮಾತನಾಡಿ, ಕಳೆದ 16 ವರ್ಷಗಳಿಂದ ಬಿಜೆಪಿ ಸಕ್ರಿಯ ಕಾರ್ಯಕರ್ತನಾಗಿ, ನಿಷ್ಠೆ, ಪ್ರಾಮಾಣಿಕತೆಯಿಂದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಹೀಗಾಗಿ ವರಿಷ್ಠರು ನನ್ನನ್ನು ಬಿಜೆಪಿ ಎಸ್ಪಿ ಮೋರ್ಚಾ ಜಿಲ್ಲಾಧ್ಯಕ್ಷನ್ನಾಗಿ ನೇಮಕ ಮಾಡಿದ್ದರು. ಈಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ನೀಡಿದ್ದಾರೆ ಎಂದರು. ಬಿಜೆಪಿ ವಿಭಾಗೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಕುಮಾರಸ್ವಾಮಿ, ವಿಜಯ ಸಂಕಲ್ಪ ಅಭಿಯಾನ ಯಾತ್ರಾ ಸಹ ಸಂಚಾಲಕ ದತ್ತಾತ್ತೇಯ, ರಾಷ್ಟಿಯ ಓಬಿಸಿ ಕಾರ್ಯಕಾರಿಣಿ ಸದಸ್ಯ ನೂರೊಂದುಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಂಗಲ ಶಿವಕುಮಾರ್, ನಾಗಶ್ರೀಪ್ರತಾಪ್, ಜಿಲ್ಲಾ ಉಪಾಧ್ಯಕ್ಷರಾದ ಆರ್.ಬಾಲರಾಜು, ಸೋಮಶೇಖರ್, ಕಾಡಾ ಅಧ್ಯಕ್ಷ ನಿಜಗುಣರಾಜು, ಡಾ. ಎ.ಆರ್. ಬಾಬು, ಚಾಮುಲ್ ಅಧ್ಯಕ್ಷ ವೈ.ಸಿ. ನಾಗೇಂದ್ರ ಇತರರು ಇದ್ದರು.