ಜಿಲ್ಲೆ

ಸ್ಥಳೀಯರಿಗೆ ಬಿಜೆಪಿ ಟಿಕೆಟ್ ನೀಡಿರುವುದು ಸ್ವಾಗತಾರ್ಹ

ಚಾಮರಾಜನಗರ: ಚಾಮರಾಜನಗರ ಮೀಸಲು ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿಯಿಂದ ಸ್ಥಳೀಯರಾದ ಎಸ್.ಬಾಲರಾಜ್ ಅವರಿಗೆ ಅವಕಾಶ ಮಾಡಿಕೊಟ್ಟಿರುವುದು ಉತ್ತಮ ಬೆಳವಣಿಗೆ ಎಂದು ಬಿಜೆಪಿ ದಲಿತ ಮುಖಂಡ ವೆಂಕಟರಮಣಸ್ವಾಮಿ(ಪಾಪು) ಹೇಳಿದರು.

ಈ ಬಾರಿಯ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದ ಸ್ಥಳೀಯರಿಗೆ ಅವಕಾಶ ನೀಡಬೇಕು ಎಂದು ನನ್ನನ್ನು ಒಳಗೊಂಡಂತೆ ಹಲವು ಮುಖಂಡರು ಒತ್ತಾಯ ಮಾಡಿದ್ದೆವು. ಸ್ಥಳೀಯರಿಗೆ ಟಿಕೆಟ್ ನೀಡಿದರೆ ಜನರಿಗೆ ಸ್ಪಂದಿಸುತ್ತಾರೆ ಎಂದು ಆಗ್ರಹಿಸಿದ್ದೆವು. ಅದರಂತೆ ಮಾಜಿ ಶಾಸಕ ಎಸ್.ಬಾಲರಾಜ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದು ಅತ್ಯಂತ ಸೂಕ್ತವಾಗಿದೆ. ಇದನ್ನು ನಾವು ಸ್ವಾಗತ ಮಾಡುತ್ತೇವೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗೋಷ್ಠಿಯಲ್ಲಿ ಮುಖಂಡ ಮುಕುಂದಮೂರ್ತಿ, ಅಸ್ಲಾಂ ಷರೀಫ್, ಎಸ್ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುತ್ತಿಗೆ ಮೂರ್ತಿ ಹಾಜರಿದ್ದರು.