ಜಿಲ್ಲೆ

ಬಾಬ ರಾಷ್ಟ್ರೀಯ ಪಂದ್ಯಾವಳಿಗೆ ಆಯ್ಕೆ: ಪಂಜ ಕುಸ್ತಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಮಂಡ್ಯ: ರಾಜ್ಯ ಪಂಜ ಕುಸ್ತಿ ಅಸೋಸಿಯೇಷನ್ ವತಿಯಿಂದ ಮೈಸೂರಿನ ನೆಕ್ಸಸ್ ಮಾಲ್‌ನಲ್ಲಿ ಇತ್ತೀಚೆಗೆ ನಡೆದ 12ನೇ ರಾಜ್ಯ ಮಟ್ಟದ ಪುರುಷರು, ಮಹಿಳೆಯರ ಮತ್ತು ಅಂಗವಿಕಲರ ಪಂಜ ಕುಸ್ತಿ ಸ್ಪರ್ಧೆಯಲ್ಲಿ ಬಾಬ ಅವರು ಪ್ರಥಮ ಬಹುಮಾನ ಪಡೆದಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ 400ಕ್ಕೂ ಹೆಚ್ಚು ಸ್ಪರ್ಧಿಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ಶ್ಯಾಂ ಸುಂದರ್ ಗರಡಿಯಲ್ಲಿ ತರಬೇತಿ ಪಡೆಯುತ್ತಿರುವ ಬಾಬ ಅವರು ಬಲಗೈ ಮತ್ತು ಎಡಗೈ ಪಂಜ ಕುಸ್ತಿ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

ಮಂಡ್ಯ ನಗರದ ಶಂಕರಮಠ ಬಡಾವಣೆಯ ಬಾಬ ಅವರು ಇಲ್ಲಿನ ರ‌್ಯಾಂಬೋ ಜಿಮ್‌ನಲ್ಲಿ ತರಬೇತುದಾರರಾಗಿ ಕೆಲಸ ಮಾಡುತ್ತಿದ್ದು, ಆ.1 ರಿಂದ 5ರವರೆಗೆ ಛತ್ತೀಸ್‌ಗಢದ ರಾಯಪುರದಲ್ಲಿ ನಡೆಯುವ ರಾಷ್ಟ್ರೀಯ ಪಂಜ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಸೋಸಿಯೇಷನ್‌ನ ಕಾರ್ಯದರ್ಶಿ ವಿಶ್ವನಾಥ್ ತಿಳಿಸಿದ್ದಾರೆ.