ಅಂತರ್ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ.  
ಜಿಲ್ಲೆ

ವಾಲಿಬಾಲ್‌ನಲ್ಲಿ ವೆಂಕಟರಮಣ ಕಾಲೇಜು ಚಾಂಪಿಯನ್

ಇಂದಿರಾ ಎನ್ ಕೆ

ಕುಂದಾಪುರ: ಮರವಂತೆ - ನಾವುಂದ ಕರಾವಳಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಂತರ್ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ವಾಲಿಬಾಲ್ ಪಂದ್ಯಾಟದಲ್ಲಿ ಕುಂದಾಪುರದ ಶ್ರೀವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದರು. ಕಾಲೇಜಿನ ಆಡಳಿತ ಮಂಡಳಿ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.