ಜಿಲ್ಲೆ

ಚಾಂಪಿಯನ್ ಆಫ್ ಚಾಂಪಿಯನ್ ಪ್ರಶಸ್ತಿ

ಇಂದಿರಾ ಎನ್ ಕೆ

ಗಂಗೊಳ್ಳಿ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನ ವೈಟ್ ಫೆದರ್ ಕನ್‌ವೆನ್ಷನ್ ಹಾಲ್‌ನಲ್ಲಿ ಭಾನುವಾರ ನಡೆದ 20ನೇ ರಾಷ್ಟ್ರಮಟ್ಟದ ಅಬಾಕಸ್, ಮೆಂಟಲ್ ಆರ್ಥ್‌ಮೆಟಿಕ್, 16ನೇ ವೇದಿಕ್ ಮಾಥ್ಸ್ ಸ್ಪರ್ಧೆಯಲ್ಲಿ ಐಪಿಎ ಕುಂದಾಪುರ ಸೆಂಟರ್‌ನ ತ್ರಿಷಾ ಆರ್.ದೇವಾಡಿಗ ಚಾಂಪಿಯನ್ ಆಫ್ ಚಾಂಪಿಯನ್ ಪ್ರಶಸ್ತಿ ಪಡೆದಿದ್ದಾಳೆ.

ಬ್ರಹ್ಮಾವರದ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್‌ನ 5ನೇ ತರಗತಿ ವಿದ್ಯಾರ್ಥಿನಿಯಾಗಿರುವ ಈಕೆಗೆ ಐಡಿಯಲ್ ಪ್ಲೇ ಅಬಾಕಸ್ ಕುಂದಾಪುರ ಸೆಂಟರ್ ಮುಖ್ಯಸ್ಥರಾದ ಪ್ರಸನ್ನ ಕೆ.ಬಿ., ಮಹಾಲಕ್ಷ್ಮೀ, ದೀಪಾ ತರಬೆೇತಿ ನೀಡಿದ್ದಾರೆ.