ಮೈಸೂರು: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೆ. 16 ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಶರಣ ನುಲಿಯ ಚಂದಯ್ಯ ನವರ 916 ನೇ ಜಯಂತಿ ಕಾರ್ಯಕ್ರಮವನ್ನು ಕರ್ನಾಟಕ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಘನ ಉಪಸ್ಥಿತಿಯಲ್ಲಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್ ಅವರ ಗೌರವ ಉಪಸ್ಥಿತಿಯಲ್ಲಿ, ಶಾಸಕರಾದ ಕೆ ಹರೀಶ್ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ, ವಿ.ಶ್ರೀನಿವಾಸ್ ಪ್ರಸಾದ್ ಹಾಗೂ ಸುಮಲತಾ ಅಂಬರೀಶ್ ಅವರು ಭಾಗವಹಿಸಲಿದ್ದಾರೆ.
ಸಮಾರಂಭದ ಅತಿಥಿಗಳಾಗಿ ವಿಧಾನಸಭಾ ಶಾಸಕರಾದ ತನ್ವೀರ್ ಸೇಠ್, ಜಿ.ಟಿ ದೇವೇಗೌಡ, ಅನಿಲ್ ಕುಮಾರ್.ಸಿ, ರವಿಶಂಕರ್.ಡಿ, ಜಿ.ಡಿ.ಹರೀಶ್‌ಗೌಡ, ದರ್ಶನ್ ಧ್ರುವನಾರಾಯಣ, ಟಿ.ಎಸ್ ಶ್ರೀವತ್ಸ, ವಿಧಾನ ಪರಿಷತ್ತಿನ ಶಾಸಕರಾದ ಮರಿತಿಬ್ಬೆಗೌಡ, ಹೆಚ್.ವಿಶ್ವನಾಥ್, ಡಾ. ಡಿ ತಿಮ್ಮಯ್ಯ, ಮಧು ಜಿ ಮಾದೇಗೌಡ, ಸಿ.ಎನ್ ಮಂಜೇಗೌಡ, ಉಪ ಮಹಾಪೌರರಾದ ಡಾ.ಜಿ ರೂಪ ಹಾಗೂ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನಿವೃತ್ತ ಸಹಾಯಕ ಮಹಾ ಪ್ರಬಂಧಕರಾದ ನಳರಾಜ್ ಭಾಗವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ ಡಿ ಸುದರ್ಶನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.