ಜಿಲ್ಲೆ

ಚಂದ್ರಕಾಂತಗೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ

ನರಗುಂದ: ಬೆಂಗಳೂರಿನ ಕೆಂಗೇರಿಯಲ್ಲಿರುವ ಕನ್ನಡ ಫಿಲಂ ಚೇಂಬರ್ ವತಿಯಿಂದ ನೀಡಲಾಗುವ ಶಿಕ್ಷಣ ಸೇವಾ ರತ್ನ ರಾಜ್ಯ ಮಟ್ಟದ ಪ್ರಶಸ್ತಿಗೆ ಪಟ್ಟಣದ ಯುವ ಗಾಯಕ, ರಾಷ್ಟ್ರ ಪ್ರಶಸ್ತಿ ವಿಜೇತ ಪಂ. ಚಂದ್ರಕಾಂತ ಇನಾಮದಾರ ಆಯ್ಕೆಗೊಂಡಿದ್ದಾರೆ.

ಶೈಕ್ಷಣಿಕ, ಸಂಗೀತ ಕ್ಷೇತ್ರದಲ್ಲಿ ಅತ್ಯದ್ಭುತ ಸಾಧನೆಗೈದಿರುವ ಚಂದ್ರಕಾಂತ ಅವರು, ಪ್ರಸ್ತುತ ಕೇಂದ್ರ ಸರ್ಕಾರದ ಜವಾಹರ್ ನವೋದಯ ವಿದ್ಯಾಲಯದಲ್ಲಿ ಸಂಗೀತ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಮಾ. 23 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.