ಚಂದ್ರನಾಯ್ಕ 
ಜಿಲ್ಲೆ

ಚಂದ್ರನಾಯ್ಕಗೆ ಗ್ರಾಮೀಣ ಶಿಕ್ಷಣ ರತ್ನ ಪ್ರಶಸ್ತಿ

ಹೂವಿನಹಡಗಲಿ: ತಾಲೂಕಿನ ಲಿಂಗನಾಯಕನಹಳ್ಳಿ ತಾಂಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಪ್ರಭಾರಿ ಮುಖ್ಯಶಿಕ್ಷಕ ಚಂದ್ರನಾಯ್ಕ ಅವರಿಗೆ ರಾಜ್ಯ ಮಟ್ಟದ ಗ್ರಾಮೀಣ ಶಿಕ್ಷಣ ರತ್ನ ಪ್ರಶಸ್ತಿ ಲಭಿಸಿದೆ. 18 ವಷರ್ಗಳಿಂದ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಚಂದ್ರನಾಯ್ಕ ಅವರ ಸೇವೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶಿಕ್ಷಕ ವೃತ್ತಿಗೆ ಸೇರ್ಪಡೆಗೊಂಡು ಇಲಾಖಾ ಆಶೋತ್ತರಗಳಿಗೆ ಸ್ಪಂದಿಸುತ್ತಾ ಗ್ರಾಮೀಣ ಪ್ರದೇಶದ ಶೈಕ್ಷಣಿಕ ಪ್ರಗತಿಯ ಜತೆಗೆ ಸಲ್ಲಿಸುತ್ತಿರುವ ಸೇವೆ ಮತ್ತು ಶಾಲೆಯ ಸರ್ವತೋಮುಖ ಬೆಳವಣಿಗೆಗಾಗಿ ಶ್ರಮಿಸಿದ ಕಾರಣಕ್ಕಾಗಿ ಪ್ರಶಸ್ತಿ ನೀಡಲಾಗಿದೆ. ಕರ್ನಾಟಕ ಸರ್ಕಾರ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೆಂಗಳೂರು ಗ್ರಾಮಾಂತರ ಘಟಕ ಮತ್ತು ನೆಲಮಂಗಲ ತಾಲೂಕು ಘಟಕದ ಸಂಯುಕ್ತಾಶ್ರಯದಲ್ಲಿ ಫೆ.8ರಂದು ನಡೆಯಲಿರುವ ರಾಜ್ಯ ಮಟ್ಟದ ಶೈಕ್ಷಣಿಕ ಕಾರ್ಯಾಗಾರ ಹಾಗೂ ರಾಜ್ಯ ಮಟ್ಟದ ಗ್ರಾಮೀಣ ಶಿಕ್ಷಣರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.