ಸುಂಟಿಕೊಪ್ಪ ಠಾಣಾಧಿಕಾರಿ ಚಂದ್ರಶೇಖರ್ ಅವರಿಗೆ ಎಂ.ಸಿ.ಶ್ರೀಧರ್ ರವರು ಅಧಿಕಾರ ಹಸ್ತಾಂತರಿಸುತ್ತಿರುವುದು. 
ಜಿಲ್ಲೆ

ಚಂದ್ರಶೇಖರ್, ಭಾರತಿ ಅಧಿಕಾರ ಸ್ವೀಕಾರ

ಸುಂಟಿಕೊಪ್ಪ: ಇಲ್ಲಿನ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಚಂದ್ರಶೇಖರ್ ಮತ್ತು ಅಪರಾಧ ವಿಭಾಗದ ಸಬ್‌ಇನ್‌ಸ್ಪೆಕ್ಟರ್ ಆಗಿ ಭಾರತಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡರು.

ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ಸಿ.ಶ್ರೀಧರ್ ಜಿಲ್ಲಾ ಪೊಲೀಸ್ ಕೇಂದ್ರ ಸ್ಥಾನಕ್ಕೆ ವರ್ಗಾವಣೆಗೊಂಡಿದ್ದು, ತೆರವಾದ ಸ್ಥಾನಕ್ಕೆ ಕುಶಾಲನಗರ ಪಟ್ಟಣ ಠಾಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್ ಅವರಿಗೆ ಶ್ರೀಧರ್ ಅಧಿಕಾರ ವಹಿಸಿಕೊಟ್ಟರು.

ಇನ್ನು ಅಪರಾಧ ವಿಭಾಗದ ಸಬ್‌ಇನ್‌ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಸ್ವಾಮಿ ಅವರು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು, ತೆರವಾದ ಸ್ಥಾನಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಭಾರತಿ ನಿಯೋಜನೆಗೊಂಡಿದ್ದಾರೆ.