ಉಡುಪಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್ ಮಾಡುವ ಮೂಲಕ ಭಾರತ ಚಂದ್ರನ ದಕ್ಷಿಣ ದ್ರುವವನ್ನು ತಲುಪಿದ ಮೊದಲ ರಾಫ್ಟ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ಸಮಸ್ತ ಭಾರತೀಯರಿಗೆ ಹೆಮ್ಮೆ ತಂದಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಸಂಭ್ರಮಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಬಿಜೆಪಿ ಜಿಲ್ಲಾ ಕಚೆೇರಿಯಲ್ಲಿ ಚಂದ್ರಯಾನ- 3ರ ಯಶಸ್ವಿ ಲ್ಯಾಂಡಿಂಗ್ ನ ನೇರ ಪ್ರಸಾರವನ್ನು ವೀಕ್ಷಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಉಡುಪಿ ಕ್ಲಾಕ್ ಟವರ್ ಬಳಿ ಸಿಹಿತಿಂಡಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಎಸ್. ಕುಂದರ್, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಉಪಸ್ಥಿತರಿದ್ದರು.