ಜಿಲ್ಲೆ

ಪ್ರೋತ್ಸಾಹ ಧನ ಹೆಚ್ಚಳಕ್ಕೆ ಪತ್ರ ಚಳವಳಿ

ಚನ್ನಗಿರಿ: ಇತರೆ ರಾಜ್ಯಗಳಂತೆ 15 ಸಾವಿರ ಪ್ರೋತ್ಸಾಹ ಧನ ನೀಡಬೇಕು ಎಂದು ತಾಲೂಕು ಸಮುದಾಯ ಆರೋಗ್ಯ ಅಧಿಕಾರಿಗಳ ಸಂಘದವರು ಭಾನುವಾರ, ಪಟ್ಟಣದ ಅಂಚೆ ಕಚೇರಿಯಲ್ಲಿ ಪತ್ರ ಚಳವಳಿ ನಡೆಸಿದರು. ಕೇಂದ್ರ-ರಾಜ್ಯ ಸರ್ಕಾರಕ್ಕೆ ಬೇಡಿಕೆಗಳ ಪಟ್ಟಿಯನ್ನು ಪೋಸ್ಟ್ ಮಾಡಿದರು.

ಸಂಘದ ಜಿಲ್ಲಾಧ್ಯಕ್ಷ ವಸಂತಕುಮಾರ್ ಮಾತನಾಡಿ, ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ ಯೋಜನೆ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಸಮುದಾಯ ಆರೋಗ್ಯ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಕೇಂದ್ರ ಸರ್ಕಾರದ ಮಾನದಂಡದಂತೆ 6 ವರ್ಷ ಕರ್ತವ್ಯ ಪೂರೈಸಿದ ಅಧಿಕಾರಿಗಳ ಸೇವೆಯನ್ನು ತಕ್ಷಣ ಕಾಯಂಗೊಳಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರದ ಆದೇಶದನ್ವಯ ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ರಾಜ್ಯದಲ್ಲಿ 8 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತಿದೆ. ಇತರೆ ರಾಜ್ಯಗಳಂತೆ 15 ಸಾವಿರ ರೂ. ಕೊಡುವ ನಿಟ್ಟಿನಲ್ಲಿ ಸರ್ಕಾರ ಮರುಪರಿಶೀಲನೆ ನಡೆಸಬೇಕು. ಇಲ್ಲದಿದ್ದರೆ ರಾಜ್ಯದ 6189 ಸಮುದಾಯ ಕೇಂದ್ರಗಳಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.