ಜಿಲ್ಲೆ

ದಾಗಿನಕಟ್ಟೆಯಲ್ಲಿ ಕಪ್ಪುಪಟ್ಟಿ ಧರಿಸಿ ವಾಲ್ಮೀಕಿ ಜಯಂತಿ ಆಚರಣೆ

Chitradurga

ಚನ್ನಗಿರಿ: ವಾಲ್ಮೀಕಿ ಸಮುದಾಯಕ್ಕೆ ಶೇ.7.5 ಮೀಸಲು ಸೌಲಭ್ಯ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ತಾಲೂಕಿನ ದಾಗಿನಕಟ್ಟೆ ಗ್ರಾಮದಲ್ಲಿ ಶನಿವಾರ ನಾಯಕ ಸಮಾಜದಿಂದ ಕೈಗೆ ಕಪ್ಪುಪಟ್ಟಿ ಧರಿಸಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.

ಶಿಕ್ಷಕ ರಂಗನಾಥ್ ಮಾತನಾಡಿ, ವಾಲ್ಮೀಕಿ ಸಮುದಾಯಕ್ಕೆ ಶೇ 7.5ರಷ್ಟು ಮೀಸಲು ಕಲ್ಪಿಸಬೇಕು. ಕೇಂದ್ರ ಸರ್ಕಾರ ಈಗಾಗಲೇ ಮೀಸಲಾತಿ ಘೋಷಣೆ ಮಾಡಿದೆ. ಆದರೆ ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದರು. ರೈತಸಂಘದ ತಾಲೂಕು ಸಂಚಾಲಕ ಎಸ್.ಎನ್.ಸಂತೋಷ, ತಾಪಂ ಸದಸ್ಯ ಎಚ್.ಎಸ್.ಮಂಜುನಾಥ್, ಗ್ರಾಪಂ ಅಧ್ಯಕ್ಷೆ ಹಾಲಮ್ಮ ಮಹೇಶ್ವರಪ್ಪ, ಮಾಜಿ ಅಧ್ಯಕ್ಷ ಗುರುಮೂರ್ತಿ, ಸಹಕಾರ ಸಂಘದ ನಿರ್ದೇಶಕ ಎಂ.ವೈ.ಪರಮೇಶ್ ಇದ್ದರು.