ಜಿಪಂ ಸಿಇಒ ದಿಗ್ವಿಜಯ ಬೋಡ್ಕೆ ಅವರಿಗೆ ಹಸೀನಾ ಫರ್ಹೀನ್ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸ್ವಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ. 2021ರಿಂದ ಇಲ್ಲಿಯವರೆಗೆ ನಗರಸಭಾ ಉಪಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದು, ನಗರದ ಅಭಿವೃದ್ಧಿ ಹಾಗೂ ಸಾರ್ವಜನಿಕ ಸೇವೆಯನ್ನು ನಿಪಕ್ಷಪಾತವಾಗಿ ಮಾಡಿಕೊಂಡು ಬಂದಿದ್ದೇನೆ. ಆದರೆ, ಕೆಲ ವೈಯಕ್ತಿಕ ಕಾರಣಗಳಿಂದ ಉಪಾಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದು, ಇದನ್ನು ಸ್ವೀಕರಿಸುವಂತೆ ತಮ್ಮ ರಾಜೀನಾಮೆ ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.