Oplus_0 
ಜಿಲ್ಲೆ

ಮಹದೇಶ್ವರಸ್ವಾಮಿ ದೇವಸ್ಥಾನದಲ್ಲಿ ರಥೋತ್ಸವ

ಯಳಂದೂರು: ಬೆನಕನ ಅಮಾವಾಸ್ಯೆ ಪ್ರಯುಕ್ತ ತಾಲೂಕಿನ ಕಂದಹಳ್ಳಿ ಗ್ರಾಮದ ಪ್ರಸಿದ್ಧ ಶ್ರೀ ಮಹದೇಶ್ವರಸ್ವಾಮಿ ದೇವಸ್ಥಾನದಲ್ಲಿ ಶನಿವಾರ ವಿಶೇಷ ಪೂಜೆ ಹಾಗೂ ರಥೋತ್ಸವ ನೆರವೇರಿತು.

ಮುಂಜಾನೆಯಿಂದಲೇ ದೇವಸ್ಥಾನದಲ್ಲಿ ಮಹದೇಶ್ವರಸ್ವಾಮಿ ಮೂರ್ತಿಗೆ ಎಳನೀರು, ಕುಂಕುಮ ಅಭಿಷೇಕ ನೆವೇರಿತು. ನಂತರ ವಿವಿಧ ಪುಷ್ಪಗಳಿಂದ ದೇವರನ್ನು ಅಲಂಕರಿಸಲಾಯಿತು. ಬಳಿಕ ವಿಶೇಷ ಪೂಜೆ ನೆರವೇರಿತು. ಹರಕೆ ಹೊತ್ತ ಭಕ್ತರು ಇದೇ ಸಂದರ್ಭದಲ್ಲಿ ದೇವರ ಸೇವೆ ಮಾಡಿದರಲ್ಲದೆ, ಹುಲಿವಾಹನ ಸೇವೆ ನೆರವೇರಿಸಿ ರಥವನ್ನು ಎಳೆಯುವ ಮೂಲಕ ದೇವರ ಕೃಪೆಗೆ ಪಾತ್ರರಾದರು.

ಅಮಾವಾಸ್ಯೆ ಹಿನ್ನೆಲೆಯಲ್ಲಿ ದುಗ್ಗಹಟ್ಟಿ, ಮೆಲ್ಲಹಳ್ಳಿ, ಹೊನ್ನೂರು, ಕೆಸ್ತೂರು, ಯರಿಯೂರು, ಉಪ್ಪಿನಮೋಳೆ, ವೈ.ಕೆ.ಮೋಳೆ, ಗುಂಬಳ್ಳಿ, ಯರಗಂಬಳ್ಳಿ, ಕೃಷ್ಣಪುರ, ಕೊಮಾರನಪುರ, ಗಣಿಗನೂರು, ಮದ್ದೂರು ಸೇರಿದಂತೆ ಜಿಲ್ಲೆಯ ವಿವಿಧ ಗ್ರಾಮಗಳಿಂದ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಯಿತು.