ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಗಣೇಶ ಚತುರ್ಥಿ ಆಚರಿಸಲಾಯಿತು. ರಾಮಕೃಷ್ಣ ಉಡುಪ, ಶರಣಕುಮಾರ ಮೊದಲಾದವರಿದ್ದರು 
ಜಿಲ್ಲೆ

ಸಿದ್ಧಿವಿನಾಯಕ ಶಾಲೆಯಲ್ಲಿ ಚೌತಿ

ಇಂದಿರಾ ಎನ್ ಕೆ

ಕುಂದಾಪುರ: ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಇತ್ತೀಚೆಗೆ ಗಣೇಶ ಚತುರ್ಥಿ ಆಚರಿಸಲಾಯಿತು.
ಶಾಲೆಯ ಶಾಂತಾರಾಮ ವೇದಿಕೆಯಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಿ, ಸಕಲ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ವಿದ್ಯಾರ್ಥಿನಿ ದಕ್ಷಾ ವಯೋಲಿನ್ ಮತ್ತು ಕೊಳಲು ನುಡಿಸಿದರು.

ಸಂಸ್ಕೃತ ಶಿಕ್ಷಕ ರಾಮಕೃಷ್ಣ ಉಡುಪ ಶುಭಹಾರೈಸಿದರು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ನೀಡಲಾಯಿತು. ಸಂಜೆ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಶರಣಕುಮಾರ, ಆಡಳಿತಾಧಿಕಾರಿ ವೀಣಾ ರಶ್ಮಿ ಎಂ, ಉಪಪ್ರಾಂಶುಪಾಲ ರಾಮ ದೇವಾಡಿಗ, ಇತರರು ಉಪಸ್ಥಿತರಿದ್ದರು.