ವಿಜಯಪುರದ ಜಿಪಂ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಪಂ ಸಿಇಒ ರಿಷಿ ಆನಂದ ಮಾತನಾಡಿದರು. ಎಸ್​.ಎಂ. ಗುಣಾರಿ, ವಿನೂತಾ ಆರ್​., ಎಸ್​.ಎಸ್​. ಕೊಳ್ಳಿ ಮತ್ತಿತರರಿದ್ದಾರೆ. 
ಜಿಲ್ಲೆ

ಶುದ್ಧ ಕುಡಿಯುವ ನೀರಿನ ಗುಣಮಟ್ಟ ಪರೀಸಿ

ಗಿರೀಶ ಸಗರ

ವಿಜಯಪುರ: ಜಿಲ್ಲೆಯಲ್ಲಿ ಜಲ ಜೀವನ ಮಿಷನ್​ (ಜೆಜೆಎಂ) ಯೋಜನೆಯಡಿ ಒಟ್ಟು 1016 ಜನವಸತಿ& ಗ್ರಾಮಗಳಿಗೆ ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳಲಾಗಿದೆ. ಸದರಿ ಯೋಜನೆಯಡಿ 577 ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನು 439 ಕಾಮಗಾರಿಗಳು ಪ್ರಗತಿ ಹಂತದಲ್ಲಿವೆ ಎಂದು ಜಿಪಂ ಸಿಇಒ ರಿಷಿ ಆನಂದ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್​ (ಡಿಡಬ್ಲೂಎಸ್​ಎಂ) ಸಮಿತಿಯ ಸಭೆ ಹಾಗೂ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜೆಜೆಎಂ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 4.64 ಲಕ್ಷ ಮನೆಗಳಿಗೆ ಕಾರ್ಯಾತ್ಮಕ ನಳಗಳನ್ನು ಅಳವಡಿಸುವ ಗುರಿ ಹೊಂದಿದ್ದು, ಅವುಗಳಲ್ಲಿ ಈಗಾಗಲೇ, 3.24 ಲಕ್ಷ ಮನೆಗಳಿಗೆ ಕಾರ್ಯಾತ್ಮಕ ನಳ ಸಂಪರ್ಕವನ್ನು ಒದಗಿಸಲಾಗಿದೆ. ಬಾಕಿ ಉಳಿದ 1.40 ಲಕ್ಷ ಮನೆಗಳಿಗೆ ಕಾರ್ಯಾತ್ಮಕ ನಳ ಸಂಪರ್ಕವನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಮತ್ತು 15 ಸಾವಿರ ಮನೆಗಳಿಗೆ ನವೆಂಬರ್​ 2024 ಮಾಹೆಯಲ್ಲಿ ನಲ್ಲಿ ಸಂಪರ್ಕ ನೀಡಲು ಗುರಿಯನ್ನು ನಿಗದಿಪಡಿಸಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಲ್ಲ ಅಧಿಕಾರಿಗಳಿಗೆ ಶುದ್ಧ ಕುಡಿಯುವ ನೀರಿನ ಗುಣಮಟ್ಟವನ್ನು ಜಂಟಿಯಾಗಿ ಪರೀೆ ನಡೆಸಬೇಕು. ಎಲ್ಲ ಜಲಮೂಲ ಹಾಗೂ ಜಲ ಸಂಗ್ರಹಾಲಯಗಳನ್ನು ಮುಂಗಾರಿನ ನಂತರ ಪರೀೆಗೆ ಆದ್ಯತೆ ನೀಡಿ ಹೆಚ್ಚಿನ ಪ್ರಮಾಣದಲ್ಲಿ ಮಾದರಿ ಪರೀೆ (ಸ್ಯಾಂಪಲ್​ ಟೆಸ್ಟಿಂಗ್​) ಗಳನ್ನು ನಡೆಸುವಂತೆ ಅವರು ಸೂಚಿಸಿದರು.

ಜಿಲ್ಲೆಯಲ್ಲಿ 34 ಮಾದರಿ ಅಂಗನವಾಡಿಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಸದರಿ ಅಂಗನವಾಡಿಗಳಿಗೆ ಜೆಜೆಎಂ ಯೋಜನೆಯಡಿ ಕಾರ್ಯಾತ್ಮಕ ನಳ ಸಂಪರ್ಕಗಳನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಎಸ್​.ಎಂ. ಗುಣಾರಿ, ಸಾಮಾಜಿಕ ಅರಣ್ಯ ಇಲಾಖೆಯ ವಿಭಾಗಿಯ ಅರಣ್ಯ ಅಧಿಕಾರಿ ವಿನೂತಾ ಆರ್​., ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ಸಣ್ಣ ನೀರಾವರಿ ಹಾಗೂ ಅಂತರಜಲ ಅಭಿವೃಧ್ಧಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಎಸ್​.ಎಸ್​. ಕೊಳ್ಳಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಬಿ.ಎಸ್​. ಕುಂಬಾರ ಮತ್ತಿತರರಿದ್ದರು.