ಉಡುಪಿ: ನಗರಸಭೆಗೆ ಕುಡಿಯುವ ನೀರು ಸರಬರಾಜಾಗುವ ಬಜೆ ಅಣೆಕಟ್ಟು ಪ್ರದೇಶಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಹಾಗೂ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಭೇಟಿ ನೀಡಿ ನೀರಿನ ಸಂಗ್ರಹ ಮಟ್ಟವನ್ನು ಪರಿಶೀಲಿಸಿದರು.
ಬಜೆ ಅಣೆಕಟ್ಟು ನೀರಿನ ಸಂಗ್ರಹ ಸಾಮರ್ಥ್ಯ, ಒಳಹರಿವು ಬಗ್ಗೆ ಚರ್ಚೆ ನಡೆಸಿ ಬೇಸಗೆ ಕಾಲದಲ್ಲಿ ನಗರದ ನೀರು ಸರಬರಾಜಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಾರಾಹಿ ಯೋಜನೆಯ ನೀರು ಸರಬರಾಜು ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು ಕುಡಿಯುವ ನೀರಿನ ಸಮಸ್ಯೆಗೆ ಶ್ರೀ ಪರಿಹಾರ ದೊರೆಯಲಿದೆ. ಆದರೂ ಬಜೆ ಅಣೆಕಟ್ಟಿನಿಂದ ನೀರು ಸರಬರಾಜು ಮಾಡುವ ಸಮಾನಂತರ ವ್ಯವಸ್ಥೆಯನ್ನೂ ಕಾಯ್ದುಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯೆ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಕಲ್ಮಾಡಿ, ನಗರಸಭಾ ಸದಸ್ಯರಾದ ಗಿರೀಶ್ ಅಂಚನ್, ಟಿ. ಜಿ. ಹೆಗ್ಡೆ, ಮಂಜುನಾಥ ಮಣಿಪಾಲ, ವಿಜಯಲಕ್ಷಿ$್ಮ, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.