ಬಬಲೇಶ್ವರ ಮತಕ್ಷೇತ್ರದ ಕನಮಡಿ ಚೆಕ್ ಪೋಸ್ಟ್‌ಗೆ ವೆಚ್ಚ ವೀಕ್ಷಕ ಐಆರ್‌ಎಸ್ ಅಧಿಕಾರಿ ಅನುಪಕುಮಾರ ಭೇಟಿ ನೀಡಿ ಪರಿಶೀಲಿಸಿದರು.  
ಜಿಲ್ಲೆ

ಚುನಾವಣೆ ವೆಚ್ಚ ವೀಕ್ಷಕರಿಂದ ಚೆಕ್‌ಪೋಸ್ಟ್ ಪರಿಶೀಲನೆ

ವಿಜಯಪುರ: ಲೋಕಸಭೆ ಚುನಾವಣೆ ಹಿನ್ನೆಲೆ ಸ್ಥಾಪಿಸಿದ ಚೆಕ್‌ಪೋಸ್ಟ್‌ಗಳ ಕಾರ್ಯನಿರ್ವಹಣೆ ಕುರಿತು ಗುರುವಾರ ವೆಚ್ಚ ವೀಕ್ಷಕ ಐಆರ್‌ಎಸ್ ಅಧಿಕಾರಿ ಅನುಪಕುಮಾರ ಪರಿಶೀಲಿಸಿದರು.

ಬಬಲೇಶ್ವರ ಮತಕ್ಷೇತ್ರದ ಕನಮಡಿ ಚೆಕ್ ಪೋಸ್ಟ್‌ಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿ ಹಾಗೂ ಕಾರ್ಯನಿರ್ವಹಣೆ ಕುರಿತು ಪರಿಶೀಲಿಸಿದರು.

ಚೆಕ್‌ಪೋಸ್ಟ್‌ಗಳಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಯ ಹಾಜರಾತಿ, ಶಾಮಿಯಾನ, ಕುಡಿಯುವ ನೀರು ಸೇರಿದಂತೆ ಚೆಕ್‌ಪೋಸ್ಟ್‌ಗಳ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದರು. ಚೆಕ್‌ಪೋಸ್ಟ್‌ಗಳು ಸರಿಯಾಗಿ ಕಾರ್ಯ ನಿರ್ವಹಿಸಬೇಕು. ನಿಯೋಜನೆಗೊಂಡ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾದ ಸಮಯಕ್ಕೆ ಪಾಳಿ ಅನುಸಾರ ಹಾಜರಾಗಿ ಕಾರ್ಯ ನಿರ್ವಹಿಸಬೇಕು. ಪ್ರತಿಯೊಂದು ವಾಹನವನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.