ಜಿಲ್ಲೆ

ಬುಧವಾರವೂ ಚೆನ್ನೈ-ಮೈಸೂರು ಶತಾಬ್ದಿ ಎಕ್ಸ್‌ಪ್ರೆಸ್ ರೈಲು ಸೇವೆ

ಚೆನ್ನೈ-ಮೈಸೂರು ಶತಾಬ್ದಿ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಡಿಸೆಂಬರ್ 20 ರಿಂದ ಬುಧವಾರವೂ ಆರಂಭಿಸಲು ನಿರ್ಧರಿಸಲಾಗಿದೆ.

ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಗುರುವಾರ ಹೊರತುಪಡಿಸಿ ವಾರದ ಎಲ್ಲ ದಿನವೂ ಚೆನ್ನೈ-ಮೈಸೂರು ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುವ ಅವಕಾಶ ನೀಡಲಾಗಿದೆ. ಸದ್ಯ ಬುಧವಾರ ಚೆನ್ನೈ-ಮೈಸೂರು ಶತಾಬ್ದಿ ಎಕ್ಸ್‌ಪ್ರೆಸ್ ಸೇವೆ ಇರಲಿಲ್ಲ.

ಈ ಬದಲಾವಣೆಯು ಮೈಸೂರು ಮತ್ತು ಚೆನ್ನೈ ನಡುವೆ ಪ್ರಯಾಣಿಸುವವರಿಗೆ ಹೆಚ್ಚಿನ ಅನುಕೂಲ ದೊರಕಿಸಲಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಯು ಬುಧವಾರ ಹೊರತುಪಡಿಸಿ ವಾರದ ಆರು ದಿನವೂ ಮುಂದುವರಿಯಲಿದೆ.

ಪ್ರಯಾಣಿಕರು ಸೀಟ್ ಬುಕ್ಕಿಂಗ್ ಮಾಡಿಕೊಳ್ಳಬಹುದು ಎಂದು ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ.