ಕುಂದಾಪುರ: ಇಲ್ಲಿನ ಯುವ ಮೆರಿಡಿಯನ್ ಕನ್ವೆನ್ಷನ್ ಸೆಂಟರ್ ಮತ್ತು ಕಶ್ವಿ ಚೆಸ್ ಸ್ಕೂಲ್ ಆಶ್ರಯದಲ್ಲಿ, ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ಮತ್ತು ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಕರ್ನಾಟಕ ಸ್ಟೇಟ್ ಸ್ಕೂಲ್ಸ್ ಚೆಸ್ ಚಾಂಪಿಯನ್ ಶಿಪ್ ಆಗಸ್ಟ್ 10, 11ರಂದು ಕೋಟೇಶ್ವರದ ಯುವ ಮೆರಿಡಿಯನ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಕುಂದಾಪುರ ಕಶ್ವಿ ಚೆಸ್ ಸ್ಕೂಲ್‌ನ ಸ್ಥಾಪಕಾಧ್ಯಕ್ಷ ನರೇಶ್ ರಾವ್ ಹೇಳಿದರು. ಜಿಲ್ಲೆಯಲ್ಲಿ ಪ್ರಥಮ ಬಾರಿ ಕರ್ನಾಟಕ ಸ್ಟೇಟ್ ಸ್ಕೂಲ್ಸ್ ಚೆಸ್ ಚಾಂಪಿಯನ್‌ಷಿಪ್ ಆಯೋಜಿಸಲಾಗಿದೆ.
ಮೂರು ಬಾರಿ ರಾಜ್ಯ ಪ್ರತಿನಿಧಿಸಿದ್ದ ಮಾನಸ ಕೋಟೇಶ್ವರ ಟೂರ್ನಿ ಉದ್ಘಾಟಿಸಲಿದ್ದಾರೆ. ವಿವಿಧ ಜಿಲ್ಲೆಗಳಿಂದ 600ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಎಲ್ಲ ಮಾಧ್ಯಮ 7ರಿಂದ 17ನೇ ವಯೋಮಿತಿಯೊಳಗಿನ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಚೆಸ್ ಸ್ಪರ್ಧೆ ನಡೆಯಲಿದ್ದು, ವಿಜೇತರಾದ ವಿದ್ಯಾರ್ಥಿಗಳು ಪಂಜಾಬ್‌ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಕೂಲ್ಸ್ ಚಾಂಪಿಯನ್‌ಷಿಪ್‌ಗೆ ಆಯ್ಕೆಯಾಗಲಿದ್ದಾರೆ ಎಂದು ನರೇಶ್ ರಾವ್ ಮಾಹಿತಿ ನೀಡಿದರು. ಕಾರ್ಯದರ್ಶಿ ಪುರುಷೋತ್ತಮ ಕಾಮತ್, ಕೋಶಾಧಿಕಾರಿ ಅಣ್ಣಪ್ಪ ದೇವಾಡಿಗ ಉಪಸ್ಥಿತರಿದ್ದರು.