ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕನಕಗಿರಿ ತಾಲೂಕಿನ ಸಿರಿವಾರ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯದ ವಿದ್ಯಾರ್ಥಿಗಳಾದ ಅಭಿಷೇಕ್, ಆಂಜನೇಯ, ಮಂಜುನಾಥ, ಗಣೇಶ್, ದೈಹಿಕ ಶಿಕ್ಷಕ ಡಾ.ಎ.ಕೆ.ಪರಶುರಾಮ ಇತರರಿದ್ದರು. 
ಜಿಲ್ಲೆ

ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Kopala - Desk - Eraveni

ಕನಕಗಿರಿ: ಗಂಗಾವತಿಯ ಬೆತಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ನಡೆದ ಅಖಂಡ ತಾಲೂಕು ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಇಲ್ಲಿನ ಲಕ್ಷ್ಮೀದೇವಿ ಕೆರೆಯ ರಸ್ತೆಯಲ್ಲಿನ ಮುರಾರ್ಜಿ ದೇಸಾಯಿ ವಸತಿ ಶಾಲೆ(ಎಸ್ಸಿ)ಯ ವಿದ್ಯಾರ್ಥಿಗಳು ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಬಿಇಒ ಕಚೇರಿ ವತಿಯಿಂದ ನಡೆದ ಚದುರಂಗ ಸ್ಪರ್ಧೆಯಲ್ಲಿ ಪ್ರಾಥಮಿಕ ವಿಭಾಗದಲ್ಲಿ ಸುಮಲತಾ, ಮಹೇಶ್ ಹಾಗೂ ಪ್ರೌಢ ವಿಭಾಗದಲ್ಲಿ ನಿಖಿಲ್, ಪ್ರಿಯಾಂಕ, ಪಲ್ಲವಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಾಚಾರ್ಯ ರಾಜು ಮಡ್ಡಿ ತಿಳಿಸಿದ್ದಾರೆ.

ಸಿರಿವಾರದ ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ: ತಾಲೂಕಿನ ಸಿರಿವಾರ ಗ್ರಾಮದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್(ಎಸ್‌ಟಿ) ವಸತಿ ಶಾಲೆಯ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು, ಆಡಳಿತ ಮಂಡಳಿ ಸಂತಸ ವ್ಯಕ್ತಪಡಿಸಿದೆ.

ಬಾಲಕರ ವಿಭಾಗದಲ್ಲಿ 10ನೇ ತರಗತಿ ವಿದ್ಯಾರ್ಥಿಗಳಾದ ಅಭಿಷೇಕ್, ಆಂಜನೇಯ, ಮಂಜುನಾಥ ಹಾಗೂ 9ನೇ ತರಗತಿ ವಿದ್ಯಾರ್ಥಿ ಗಣೇಶ್ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಮಗ್ರ ಚಾಂಪಿಯನ್‌ಶಿಪ್ ಪಡೆದಿದ್ದಾರೆ ಎಂದು ಶಾಲೆಯ ದೈಹಿಕ ಶಿಕ್ಷಕ ಡಾ.ಪರಶುರಾಮ ಎ.ಕೆ. ತಿಳಿಸಿದ್ದಾರೆ.