ಹುಬ್ಬಳ್ಳಿ : ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ಕಾರ್ಯಕ್ರಮದ ಅಂಗವಾಗಿ ನಗರದ ರಂಗರೇಖಾ ಕಲಾ ಬಳಗದ ವತಿಯಿಂದ ‘ಛತ್ರಪತಿ ಶಿವಾಜಿ’ ಐತಿಹಾಸಿಕ ನಾಟಕ ಪ್ರದರ್ಶನವನ್ನು ಜೂ. 8 ರಂದು ಮಧ್ಯಾಹ್ನ 4 ಗಂಟೆಗೆ ಇಲ್ಲಿನ ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಶಾಸಕ ಮಹೇಶ ಟೆಂಗಿನಕಾಯಿ ಉದ್ಘಾಟಿಸುವರು. ಶಾಸಕ ಶ್ರೀನಿವಾಸ ಮಾನೆ ಅವರು ಪುಷ್ಪ ಸಮರ್ಪಣೆ ಮಾಡುವರು. ಧಾರವಾಡ ರಂಗಾಯಣದ ನಿಕಟಪೂರ್ವ ಅಧ್ಯಕ್ಷ ಸುಭಾಸ ನರೇಂದ್ರ ಅಧ್ಯಕ್ಷತೆ ವಹಿಸುವರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಕುಮಾರ ಬೆಕ್ಕೇರಿ, ಹುಬ್ಬಳ್ಳಿಯ ಸಮಸ್ತ ಮರಾಠಾ ಸಮಾಜ ಸೇವಾ ಸಂಘದ ಅಧ್ಯಕ್ಷ ದಯಾನಂದ ಚವ್ಹಾಣ ಹಾಗೂ ಇತರರು ಅತಿಥಿಗಳಾಗಿ ಪಾಲ್ಗೊಳ್ಳುವರು.