ಜಿಲ್ಲೆ

`ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ'

ವಿಜಯವಾಣಿ ಸುದ್ದಿಜಾಲ ಧಾರವಾಡ
ಮುಖ್ಯಮಂತ್ರಿ ಹುದ್ದೆಯ ಮೇಲೆ ಎಲ್ಲರಿಗೂ ಆಸೆ ಇರುತ್ತದೆ. ಅದೇರೀತಿ 8 ಬಾರಿ ಶಾಸಕರಾಗಿರುವ ಆರ್.ವಿ. ದೇಶಪಾಂಡೆಯವರು ಸಿಎಂ ಆಗಬೇಕೆಂಬ ಆಸೆ ಇಟ್ಟುಕೊಂಡಿದ್ದಾರೆ. ಅದರಲ್ಲಿ ತಪ್ಪೇನೂ ಇಲ್ಲ. ನನಗೂ ಆಸೆ ಇದೆ. ಆದರೆ, ನಮ್ಮಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂವರೆ ವರ್ಷಗಳ ಬಳಿಕ ಸಿಎಂ ಬದಲಾಗುತ್ತಾರೆ ಎಂದು ರಾಹುಲ್ ಗಾಂಽ ಹೇಳಿದ್ದಾರಾ? ಸಿದ್ದರಾಮಯ್ಯ ಟಗರು ಇದ್ದಂಗೆ. ಸಿದ್ದರಾಮಯ್ಯ ಸಿಎಂ ಎಂದು ಡಿ.ಕೆ. ಶಿವಕುಮಾರ ಅವರೇ ಹೇಳಿದ್ದಾರೆ. ನಾವು ಬಿಜೆಪಿಯ ಎ¯್ಲ ಹಗರಣಗಳನ್ನು ಹೊರಗೆ ತೆಗೆಯುತ್ತೇವೆ ಎಂದರು.
ಚಾಮರಾಜನಗಕ್ಕೆ ಹೋದರೆ ಅಽಕಾರ ಹೊಗುತ್ತದೆ ಎನ್ನುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಾನು ಹಲವಾರು ಬಾರಿ ಹೋಗಿದ್ದೇವೆ. ಏನಾದರೂ ಆಗಿದೆಯ? ಎಂದು ಪ್ರಶ್ನಿಸಿದರು.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಏನೂ ಇಲ್ಲ ಎಂಬುದು ಕುಮಾರಸ್ವಾಮಿ ಅವರಿಗೆ ಗೊತ್ತಿದೆ. ಅದಕ್ಕೆ ಅವರು ಪಾದಯಾತ್ರೆಗೆ ಹೋಗುವುದಿಲ್ಲ ಎಂದಿದ್ದರು. ಆದರೆ, ಬಿಜೆಪಿ ಹೈಕಮಾಂಡ್ ಹೇಳಿದ್ದಕ್ಕೆ ಹೋದರು. ಪ್ರಾಸಿಕ್ಯೂಷನ್‌ನಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಏನೂ ಆಗುವುದಿಲ್ಲ. ರಾಜ್ಯಪಾಲರ ಪರ ವಕೀಲರು ಸಿದ್ದರಾಮಯ್ಯ ಬೇನಾಮಿ ಆಸ್ತಿ ಎನ್ನುವಂತೆ ವಾದ ಮಾಡಿದ್ದಾರೆ. ಆದರೆ, ಇದರಲ್ಲಿ ಸಿದ್ದರಾಮಯ್ಯ ಪಾತ್ರವೇ ಇಲ್ಲ ಎಂದರು.
ರಾಜ್ಯಪಾಲರ ಭೇಟಿ ಹೋದಾಗ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿಲ್ಲ ಎಂದು ನಮಗೆ ಮೌಖಿಕವಾಗಿ ಹೇಳಿದ್ದಾರೆ. ಕುಮಾರಸ್ವಾಮಿ ವಿರುದ್ಧವೂ ಲೋಕಾಯುಕ್ತ ಪ್ರಕರಣ ಇದೆ. ಆದರೆ, ಅದಕ್ಕೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿಲ್ಲ ಎಂದರು.