ಜಿಲ್ಲೆ

ಮುಖ್ಯಮಂತ್ರಿ ಜಿಲ್ಲಾ ಪ್ರವಾಸ

Dharwada - Vikram Nadiger

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ. 13ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ ಸವದತ್ತಿ ಕಾರ್ಯಕ್ರಮ ಬಳಿಕ ಸಂಜೆ 4 ಗಂಟೆಗೆ ಧಾರವಾಡಕ್ಕೆ ಆಗಮಿಸಲಿದ್ದಾರೆ.
ರಡ್ಡಿ ಸಹಕಾರ ಬ್ಯಾಂಕ್​ ಶತಮಾನೋತ್ಸವ ಸಂಭ್ರಮ, ಪ್ರಧಾನ ಕಚೇರಿ ನೂತನ ಕಟ್ಟಡದ ಉದ್ಘಾಟನೆ ಮತ್ತು ಎಫ್​.ಟಿ.ನಲವಡಿ ಹಾಗೂ ಸಹಕಾರ ರಂಗದ ಭೀಷ್ಮ ಕೆ.ಎಚ್​. ಪಾಟೀಲರ ಪುತ್ಥಳಿಗಳ ಅನಾವರಣ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸತ್ತೂರನ ಡಿ. ವಿರೇಂದ್ರ ಹೆಗ್ಗಡೆ ಕಲಾ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ರಾತ್ರಿ 7 ಗಂಟೆಗೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.